Homeಕರ್ನಾಟಕಎನ್‌ಡಿಎಗೆ ಪೂರ್ಣ ಬಹುಮತ ದೊರಕುವುದಿಲ್ಲ: ಸಿಎಂ ಸಿದ್ದರಾಮಯ್ಯ

ಎನ್‌ಡಿಎಗೆ ಪೂರ್ಣ ಬಹುಮತ ದೊರಕುವುದಿಲ್ಲ: ಸಿಎಂ ಸಿದ್ದರಾಮಯ್ಯ

ಎನ್‌ಡಿಎಗೆ ಪೂರ್ಣ ಬಹುಮತ ದೊರಕುವುದಿಲ್ಲ. ಬಿಜೆಪಿ ವಿರುದ್ಧ ವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ. 400ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರಿನ ತಮ್ಮ ನಿವಾಸದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೋದಿಯವರು ನಾಳೆ ಮೈಸೂರಿಗೆ ಆಗಮಿಸುತ್ತಿದ್ದಾರೆ. ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ? ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ, ತೆರಿಗೆ ಹಂಚಿಕೆ, ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ ಎಂಬುದಕ್ಕೆಲ್ಲಾ ಉತ್ತರ ಹೇಳಲಿ” ಎಂದರು.

ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಏಕಿಲ್ಲ

“ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂದು ಮೋದಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ? ಎಂದು ಪ್ರಶ್ನಿಸಿದರು.

“ಉತ್ತರ ಕರ್ನಾಟಕದಲ್ಲಿ ಐದು ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೇ 3-4 ತಿಂಗಳು ಬಂದು ಸೋಲುವ ವರದಿಯಾಧಾರದ ಮೇಲೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿ ಯಾದಾಗ ಸಾವರ್ಕರ್ ಹಾಗು ಗೋಲ್ವಾಲ್ಕರ್ ಅವರು ಭಾರತದ ಸಂವಿಧಾನವನ್ನು ವಿರೋಧಿಸಿದ್ದರು” ಎಂದರು.

ರಾಮೇಶ್ವರ ಕಾಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್.ಐ. ಎ ತಂಡ ಮತ್ತು ಕರ್ನಾಟಕ ಪೊಲೀಸ್‌ರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ವೇಳೆ ಶಾಘಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments