ಚೊಂಬು ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ ಎಂದು ತಿಳಿಸಲು ಕಾಂಗ್ರೆಸ್ ನೀಡಿದೆ. ದೇಶದ ಜನರಿಗೆ 15 ಲಕ್ಷ ಕೊಟ್ಟರೇ? 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು , ಅಚ್ಚೇ ದಿನ್ ಬಂದಿದೆಯೇ? ಅದಕ್ಕೆ ಚಂಬು ಕೊಟ್ಟಿದ್ದಾರೆ ಎಂದು ಜಾಹೀರಾತು ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬಿಜೆಪಿ ಸರ್ಕಾರ ಜನರಿಗೆ ಖಾಲಿ ಚೊಂಬು ಕೊಟ್ಟಿದೆ ಕಾಂಗ್ರೆಸ್ನ ಚೊಂಬು ಜಾಹೀರಾತನ್ನು ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರ ಚಿನ್ಹೆ ಎಂದು ಬಿಜೆಪಿ ಮಾತನಾಡಿರುವ ಬಗ್ಗೆ ಮಾತನಾಡಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದರು.
“ಮೋದಿ ಕೊಟ್ಟಿರುವ ಆಶ್ವಾಸನೆಗಳನ್ನು ಒಂದನ್ನೂ ಈಡೇರಿಸಿಲ್ಲ. ದೇಶದ ಜನರಿಗೆ ಖಾಲಿ ಚಂಬು ನೀಡಿದ್ದಾರೆ ಎಂದು ಜಾಹೀರಾತು ನೀಡಿದ್ದೇವೆ. ಅವರು ಏನಾದರೂ ಹೇಳಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೊಕ್ಕಸ ಖಾಲಿಯಾಗಿಲ್ಲ. ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದೇವೆ” ಎಂದರು.
“ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ. ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ” ಎಂದು ಹೇಳಿದರು.
“ಕುಮಾರಸ್ವಾಮಿ ಅವ ರು ಕೋಮುವಾದಿಗಳಾಗಿದ್ದು, ಜನತಾ ದಳ (ಎಸ್) ಪಕ್ಷವನ್ನು ರದ್ದು ಮಾಡಬೇಕು. ನನಗೆ ಅವರ ಬಗ್ಗೆ ಭಯವಿದ್ದರೆ ಇವರಿಬ್ಬರ ವಿರುದ್ಧ ಹೋರಾಟ ಮಾಡುತ್ತಿರಲಿಲ್ಲ. ಅವರಿಗೆ ಭಯವಿರುವುದರಿಂದ ಮೈತ್ರಿ ಮಾಡಿಕೊಂಡಿದ್ದಾರೆ” ಎಂದು ಕುಟುಕಿದರು.
ನೇಹಾ ಕೊಲೆಗೆ ಸಿಎಂ ತೀವ್ರ ಖಂಡನೆ
“ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ. ಇದು ಕೆಟ್ಟ ಮನಸ್ಥಿತಿ. ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲಾಗುತ್ತೆ” ಎಂದು ಸಿದ್ದರಾಮಯ್ಯ ತಿಳಿಸಿದರು.