Homeಕರ್ನಾಟಕ14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ ಉಸ್ತುವಾರಿಗಳನ್ನಾಗಿ ಕಾಂಗ್ರೆಸ್‌ ನೇಮಿಸಿದೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್‌ ಈ ಕುರಿತು ನಿರ್ದೇಶನ ನೀಡಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲು 14 ಲೋಕಸಭಾ ಕ್ಷೇತ್ರಗಳಿಗೆ ಹೆಚ್ಚುವರಿ ಉಸ್ತುವಾರಿಯನ್ನಾಗಿ ಸಚಿವರನ್ನು ನೇಮಿಸಲಾಗಿದೆ. ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಕೋರಿದ್ದಾರೆ.

“ರಾಜ್ಯದಲ್ಲಿ ನಡೆದ ಮೊದಲ ಹಂತದ ಚುನಾವನೆಯಲ್ಲಿ ತಾವುಗಳು (ಸಚಿವರು) ಅತ್ಯಂತ ವ್ಯವಸ್ಥಿತವಾಗಿ ಚುನಾವಣೆ ಪ್ರಚಾರ ಕೈಗೊಂಡಿದ್ದೀರಿ. ತಮಗೆ ಪಕ್ಷದ ಪರವಾಗಿ ಧನ್ಯವಾದ ತಿಳಿಸುವೆ. 2ನೇ ಹಂತದ ಚುನಾವಣೆ ಮೇ 7ರಂದು ನಡೆಯಲಿದ್ದು, ಪ್ರಸ್ತುತ ಚುನಾವಣೆಯೂ ಅತ್ಯಂತ ಮಹತ್ವದ್ದಾಗಿದ್ದರಿಂದ ಉಳಿದ ಕ್ಷೇತ್ರಗಳ ಗೆಲುವಿಗೆ ಶ್ರಮಿಸಿ” ಎಂದು ಡಿಕೆ ಶಿವಕುಮಾರ್‌ ಮನವಿ ಮಾಡಿದ್ದಾರೆ.

ಯಾವ ಕ್ಷೇತ್ರಕ್ಕೆ ಯಾರು ಹೆಚ್ಚುವರಿ ಉಸ್ತುವಾರಿ?

ದಾವಣಗೆರೆ ಲೋಕಸಭಾ ಕ್ಷೇತ್ರ – ಡಾ. ಜಿ ಪರಮೇಶ್ವರ್‌
ಧಾರವಾಡ ಲೋಕಸಭಾ ಕ್ಷೇತ್ರ – ದಿನೇಶ್‌ ಗುಂಡೂರಾವ್‌
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ – ಕೆ ಜೆ ಜಾರ್ಜ್‌
ಚಿಕ್ಕೋಡಿ ಲೋಕಸಭಾ ಕ್ಷೇತ್ರ – ಕೆ ಎಚ್‌ ಮುನಿಯಪ್ಪ
ಹಾವೇರಿ ಲೋಕಸಭಾ ಕ್ಷೇತ್ರ – ಕೃಷ್ಣ ಬೈರೇಗೌಡ
ಬಳ್ಳಾರಿ ಲೋಕಸಭಾ ಕ್ಷೇತ್ರ – ರಾಮಲಿಂಗಾರೆಡ್ಡಿ
ಬೆಳಗಾವಿ ಲೋಕಸಭಾ ಕ್ಷೇತ್ರ – ಬೈರತಿ ಸುರೇಶ್‌
ಕೊಪ್ಪಳ ಲೋಕಸಭಾ ಕ್ಷೇತ್ರ – ಡಾ. ಎಂ ಸಿ ಸುಧಾಕರ್‌
ರಾಯಚೂರು ಲೋಕಸಭಾ ಕ್ಷೇತ್ರ – ಕೆ ಎನ್‌ ರಾಜಣ್ಣ
ಬೀದರ್‌ ಲೋಕಸಭಾ ಕ್ಷೇತ್ರ – ಕೆ ವೆಂಕಟೇಶ್‌
ಶಿವಮೊಗ್ಗ ಲೋಕಸಭಾ ಕ್ಷೇತ್ರ – ಎನ್‌ ಚಲುವರಾಯಸ್ವಾಮಿ
ಬಿಜಾಪುರ ಲೋಕಸಭಾ ಕ್ಷೇತ್ರ – ಎಚ್‌ ಸಿ ಮಹದೇವಪ್ಪ
ಬಾಗಲಕೋಟೆ ಲೋಕಸಭಾ ಕ್ಷೇತ್ರ – ಡಿ ಸುಧಾಕರ್‌

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments