Homeಕರ್ನಾಟಕಮೋದಿ ಹತಾಶರಾಗಿದ್ದು, ಬಿಜೆಪಿಗೆ ರಾಷ್ಟ್ರ ಮಟ್ಟದಲ್ಲಿ ಸೋಲು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

ಮೋದಿ ಹತಾಶರಾಗಿದ್ದು, ಬಿಜೆಪಿಗೆ ರಾಷ್ಟ್ರ ಮಟ್ಟದಲ್ಲಿ ಸೋಲು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ ಬಿಜೆಪಿ, ಎನ್ ಡಿಎ ಅಧಿಕಾರಕ್ಕೆ ಬರುವುದಿಲ್ಲ. ತಮಗೆ ಸ್ಪಷ್ಟ ಸೋಲಾಗಿದೆ ಎನ್ನುವುದು ಖಚಿತವಾಗುತ್ತಿದ್ದಂತೆ ಮೋದಿಯವರು ಹತಾಶರಾಗಿದ್ದು, ಭಯಾನಕ ಸುಳ್ಳುಗಳಿಂದ ಭಾರತೀಯ ದಾರಿತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಗೋಕಾಕ್‌ನಲ್ಲಿ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮೃಣಾಳ್ ಹೆಬ್ಬಾಳ್ಕರ್ ಪರವಾಗಿ ಮತ ಮತಯಾಚಿಸಿ ಮಾತನಾಡಿದರು.

“ಬೆಲೆಏರಿಕೆ, ನಿರುದ್ಯೋಗದ ಬಗ್ಗೆ ಪ್ರಧಾನಿ ಮೋದಿ ಮಾಡನಾಡುವುದಿಲ್ಲ. 2014 ಹಾಗೂ 2019 ರಲ್ಲಿ ಭಾರತೀಯರಲ್ಲಿ ಭ್ರಮೆಯನ್ನು ಹುಟ್ಟಿಸಿ ಅಧಿಕಾರಕ್ಕೆ ಬಂದ ಮೋದಿ ಒಂದೇ ಒಂದು ಭರವಸೆಗಳನ್ನೂ ಈಡೇರಿಸಲಿಲ್ಲ. ಪ್ರತಿ ಬಾರಿ ಕೇವಲ ಭಾವನಾತ್ಮಕವಾಗಿ ಜನರನ್ನು ಪ್ರಚೋದಿಸುವಂತೆ ಸುಳ್ಳುಗಳನ್ನು ಹೇಳುತ್ತಿಲೇ ಇದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆ ಸಂಪೂರ್ಣ ಹತಾಶರಾಗಿ ಹೆಚ್ಚೆಚ್ಚು ಸುಳ್ಳುಗಳನ್ನು ಹೇಳಿ ಹೇಳಿ ಎಷ್ಟು ಸಾಧ್ಯವೋ ಅಷ್ಟು ಭಾರತೀಯರ ದಾರಿತಪ್ಪಿಸಿ ಲಾಭ ಮಾಡಿಕೊಳ್ಳಲು ಒದ್ದಾಡುತ್ತಿದ್ದಾರೆ” ಎಂದರು.

“ಬಿಜೆಪಿಯೇತರರು ದಲಿತರ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ನೀಡಲಿದೆ ಎಂದು ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಎಂದಿಗೂ ಸಂವಿಧಾನಕ್ಕೆ ವಿರುದ್ಧವಾಗಿ ಕೆಲಸ ಮಾಡದೇ , ಸಾಮಾಜಿಕ ನ್ಯಾಯದ ಪರವಾಗಿದೆ ಎನ್ನುವುದು ಇಡೀ ವಿಶ್ವಕ್ಕೆ ಗೊತ್ತಿದೆ” ಎಂದು ಹೇಳಿದರು.

ಮಹಿಳೆಯರ ಖಾತೆಗೆ ವರ್ಷಕ್ಕೆ ಒಂದು ಲಕ್ಷ

“ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲಗಳನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು. 25 ಲಕ್ಷದವರೆಗೆ ಆರೋಗ್ಯ ವಿಮೆ ಸೌಲಭ್ಯ ನೀಡಲಾಗುವುದು. ಸಾಮಾಜಿಕ ನ್ಯಾಯ ತರಲು ದೇಶದಾದ್ಯಂತ ಜಾತಿ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು. ಆದ್ದರಿಂದ ಜನರಿಗೆ ಅನುಕೂಲ ಮಾಡಿಕೊಡುವ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕೇ? ಅಥವಾ ಸುಳ್ಳು ಹೇಳುವ ಮೋದಿಯವರು ಅಧಿಕಾರಕ್ಕೆ ಬರಬೇಕೇ? ಎಂಬುದನ್ನು ಯೋಚಿಸಿ ನಿರ್ಧರಿಸಿ” ಎಂದರು.

“ಪ್ರತಿ ಭಾರತೀಯರ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀವಿ ಎಂದು ಪುಸಲಾಯಿಸಿ, ಯಾಮಾರಿಸಿ ಹತ್ತು ವರ್ಷಗಳಾದರೂ ಈವರೆಗೆ ಯಾರ ಖಾತೆಗೂ 15ರೂ. ಕೂಡ ಬಂದಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದವರು, ನಿರುದ್ಯೋಗಿ ಯುವಕರು ಕೆಲಸ ಕೊಡಿ ಎಂದರೆ ಪಕೋಡ ಮಾರಿ ಎಂದು ಅತ್ಯಂತ ಬೇಜವಾಬ್ದಾರಿ ಉತ್ತರ ನೀಡಿದರು. ಇವರು ಈ ದೇಶದ ಪ್ರಧಾನಿಯಾಗಲು ಯೋಗ್ಯರೇ? ಎಂದು ಕಿಡಿಕಾರಿದರು.

ಸಚಿವರಾದ ಸತೀಶ್ ಜಾರಕಿಹೊಳಿ, ಡಾ. ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಲಕ್ಷ್ಮಣ್ ಸವದಿ, ಎಐಸಿಸಿ ಕಾರ್ಯದರ್ಶಿಗಳು, ಶಾಸಕರಾದ ವಿ.ಕೆ.ಸಂಗಮೇಶ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿನಯ್ ನವಲಗಟ್ಟಿ, ಪಕ್ಷದ ಮುಖಂಡರಾದ ಡಾ: ಮಹಾಂತೇಶ್ ಕಡಾಡಿ, ಅಶೋಕ್ ಪೂಜಾರಿ , ಚಂದ್ರಶೇಖರ್ ಕೊಣ್ಣೂರು, ಸಿದ್ದಲಿಂಗ ದಳವಾಯಿ, ಹಾಗೂ ಮುಖಂಡರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments