ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತಮ್ಮ ಕಾರ್ಯಸಾಧನೆಗಾಗಿ ಹಲವಾರು ಅಸ್ತ್ರಗಳನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಅವರಿಗೆ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಇದ್ದು, ಅದಕ್ಕಾಗಿ ಅವರು ಏನು ಬೇಕಾದರೂ ಮಾಡಬಲ್ಲರು ಎಂದು ಬಿಜೆಪಿ ನಾಯಕ ನರಸಿಂಹ ನಾಯಕ್ (ರಾಜು ಗೌಡ) ಹೇಳಿದರು.
ಯಾದಗಿರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಜನ ಕಾದು ನೋಡಲಿ, ಮುಂದೊಂದು ದಿನ ಅವರು ಯತೀಂದ್ರ ಸಿದ್ದರಾಮಯ್ಯ ಮೇಲೆ ಯಾವುದಾದರೂ ಆರೋಪ ಹೊರಸಿ ಅದಕ್ಕೆ ಸಂಬಂಧಿಸಿದ ವಿಡಿಯೋ ಬಿಡುಗಡೆ ಮಾಡಿ ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುತ್ತಾರೆ” ಎಂದರು.
“ಡಿಕೆ ಸಹೋದರರ ಜೊತೆ ಹೆಚ್ಚು ಒಡನಾಟ ಇಟ್ಟುಕೊಳ್ಳುವುದು ಬೇಡ ಅಂತ ಸಿದ್ದರಾಮಯ್ಯವನವರಿಗೆ ಸಲಹೆ ನೀಡಬಯಸುವೆ. ರಾಹುಲ್ ಗಾಂಧಿಯವರ ಮನಸ್ಸಲ್ಲೂ ಅದೇ ಇರುವಂತಿದೆ, ಮಂಬರುವ ದಿನಗಳಲ್ಲಿ ಅವರು ಸಿದ್ದರಾಮಯ್ಯರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಬಹುದು” ಎಂದು ಹೇಳಿದರು.