Homeಕರ್ನಾಟಕಪ್ರಜ್ವಲ್‌ ಪ್ರಕರಣ | 10 ಪೆನ್​​ಡ್ರೈವ್‌, ಹಾರ್ಡ್ ಡಿಸ್ಕ್ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ ಎಸ್‌ಐಟಿ

ಪ್ರಜ್ವಲ್‌ ಪ್ರಕರಣ | 10 ಪೆನ್​​ಡ್ರೈವ್‌, ಹಾರ್ಡ್ ಡಿಸ್ಕ್ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ ಎಸ್‌ಐಟಿ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಹಾಸನ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿರುವ ವಿಶೇಷ ತನಿಖಾ ತಂಡ‌ (ಎಸ್‌ಐಟಿ) ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ 10 ಪೆನ್​​ಡ್ರೈವ್‌ ಮತ್ತು ಹಾರ್ಡ್ ಡಿಸ್ಕ್ ವಶಪಡಿಸಿಕೊಂಡಿದೆ.

ಪ್ರೀತಂ ಗೌಡ ಆಪ್ತರು ಮತ್ತು ಪ್ರಕರಣದ ಸಂಬಂಧ ಈಗಾಗಲೇ ಬಂಧಕ್ಕೊಳಗಾಗಿರುವವರ ಮನೆಗಳ ಮೇಲೆ ಎಸ್​ಐಟಿ ದಾಳಿ ನಡೆಸಿತ್ತು. ಈಗ ವಶಕ್ಕೆ ಪಡೆದಿರುವ ಪೆನ್​ಡ್ರೈವ್​ಗಳನ್ನು ಎಸ್​ಐಟಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದೆ.

ಪ್ರೀತಂ ಗೌಡ ಆಪ್ತರ ಮನೆಯಲ್ಲಿ ದೊರೆತ ಪೆನ್​​ಡ್ರೈವ್ ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದ್ದೇ ಇಲ್ಲವೋ ಎಂಬುದು ವಿಧಿವಿಜ್ಞಾನ ಪ್ರಯೋಗಾಲಯದ ವರದಿಯಿಂದ ಸತ್ಯ ತಿಳಿಯಬೇಕಿದೆ.

7 ಪೆನ್ ಡ್ರೈವ್, 6 ಹಾರ್ಡ್ ಡಿಸ್ಕ್, ನಾಲ್ಕು ಲ್ಯಾಪ್ ಟಾಪ್, ಮೂರು ಡೆಸ್ಕ್ ಟಾಪ್ ಎಸ್‌ಐಟಿ ವಶಕ್ಕೆ ಪಡೆದಿದೆ. ದಾಳಿ ನಡೆಸಿದ ಕಡೆಯಲ್ಲಿ ಸಿಕ್ಕ ಸಿಸಿ ಕ್ಯಾಮರಾಗಳ ದೃಶ್ಯಗಳನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಪತ್ತೆಯಾದ ಹಾರ್ಡ್‌ ಡಿಸ್ಕ್​​ಗಳಲ್ಲಿರುವ ವಿಡಿಯೋಗಳನ್ನೂ ಪರಿಶೀಲನೆ ಮಾಡಲಾಗುತ್ತಿದ್ದು, ವಿಡಿಯೋಗಳನ್ನು ಪೆನ್ ಡ್ರೈವ್, ಲ್ಯಾಪ್ ಟಾಪ್ ಹಾಗೂ ಡೆಸ್ಕ್ ಟಾಪ್​​ಗೆ ಕಾಪಿ ಮಾಡಿ ನಂತರ ಬೇರೆಯವರಿಗೆ ಹಂಚಿರುವ ಅನುಮಾನವಿದೆ.

ಚೇತನ್ ಹಾಗು ಲಿಖಿತ್ ಎಂಬವರನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ, ಮೊದಲ ಐವರು ಆರೋಪಿಗಳ ಬಂಧನ ಇನ್ನೂ ಆಗಿಲ್ಲ. ಕಾಂಗ್ರೆಸ್ ಕಾರ್ಯಕರ್ತರೆಂದು ಗುರುತಿಸಲಾಗಿರುವ ನವೀನ್ ಗೌಡ, ಪುಟ್ಟಿ ಆಲಿಯಾಸ್ ಪುಟ್ಟರಾಜ್​​ರನ್ನು ಈವರೆಗೂ ಎಸ್​ಐಟಿ ಬಂಧಿಸಿಲ್ಲ. ಪೆನ್ ಡ್ರೈವ್ ಹೊಂದಿದ್ದ ಮೂಲ ವ್ಯಕ್ತಿ, ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್‌ ನನ್ನೂ ತನಿಖಾ ತಂಡ ವಶಕ್ಕೆ ಪಡೆದಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments