Homeಕರ್ನಾಟಕರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಹೆಚ್ಚಿಲ್ಲ, ಬಿಜೆಪಿ ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ: ಸಚಿವ ಪರಮೇಶ್ವರ್‌

ರಾಜ್ಯದಲ್ಲಿ ಅಪರಾಧ ಪ್ರಕರಣ ಸಂಖ್ಯೆ ಹೆಚ್ಚಿಲ್ಲ, ಬಿಜೆಪಿ ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ: ಸಚಿವ ಪರಮೇಶ್ವರ್‌

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಬಿಜೆಪಿಯವರನ್ನು ಕೇಳಿಕೊಂಡು ಕಾನೂನು ಪಾಲನೆ ಮಾಡುತ್ತಿಲ್ಲ. ಕಾನೂನು, ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿಯವರು ಎಷ್ಟೇ ಪ್ರಯತ್ನ ಮಾಡಿದರೂ ಅದನ್ನು ನಿಯಂತ್ರಿಸುವ ಶಕ್ತಿ ಸರ್ಕಾರಕ್ಕಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿರುಗೇಟು ನೀಡಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಪೊಲೀಸ್‌ ಮಹಾನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ಕೊಟ್ಟಿರುವ ಬಗ್ಗೆ ತುಮಕೂರಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ. ಎಲ್ಲವನ್ನೂ ನಿಯಂತ್ರಣದಲ್ಲೇ ಇದೆ” ಎಂದರು.

“ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ವರದಿ ಗಮನಕ್ಕೆ ಬಂದಿದೆ. ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗುವುದು. ಜನರ ಸುರಕ್ಷತೆಗಾಗಿ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಸಿದ್ಧ” ಎಂದು ಹೇಳಿದರು.

“ನಾಲ್ಕು ತಿಂಗಳ ವರದಿ ಇಟ್ಟುಕೊಂಡು ವಿಶ್ಲೇಷಣೆ ಮಾಡಲಾಗದು. ಒಂದೊಂದು ಘಟನೆಗೂ ಪ್ರತ್ಯೇಕ ಕಾರಣಗಳು ಇರುತ್ತವೆ. ಬಿಜೆಪಿಯವರ ಆಡಳಿತದಲ್ಲಿ ಎಷ್ಟು ಕೊಲೆಗಳು ನಡೆದಿದ್ದವು. ನಮ್ಮ ಸರ್ಕಾರದ ಅವಧಿಯಲ್ಲಿ ಎಷ್ಟು ನಡೆದಿವೆ ಎಂಬ ಅಂಕಿ ಸಂಖ್ಯೆ ಬಿಡುಗಡೆ ಮಾಡುತ್ತೇವೆ. ನಾವು ಬಿಡುಗಡೆ ಮಾಡುವ ವರದಿಯಿಂದ ಯಾರ ಅವಧಿಯಲ್ಲಿ ಹೆಚ್ಚು ಕೊಲೆಗಳು ನಡೆದಿದ್ದವು ಎಂಬುದು ರಾಜ್ಯದ ಜನರಿಗೆ ಗೊತ್ತಾಗಲಿದೆ” ಎಂದು ತಿಳಿಸಿದರು.

ವಕೀಲ ದೇವರಾಜೇಗೌಡನಿಗೆ ₹100 ಕೋಟಿ ಆಮಿಷ ಒಡ್ಡಿರುವ ಬಗ್ಗೆ ಸಚಿವರು ಪ್ರತಿಕ್ರಿಯಿಸಿ,”ದೇವರಾಜೇಗೌಡನ ಹೇಳಿಕೆಯನ್ನು ಎಸ್ಐಟಿ ಅಧಿಕಾರಿಗಳು ನೋಡಿಕೊಳ್ಳುತ್ತಾರೆ. ನಾನು ಹೊರಗೆ ಬಂದರೆ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ‌ ಎಂದರೆ ಅವರು ಜೈಲಿನಲ್ಲೇ ಇರಬೇಕಾಗುತ್ತದೆ” ಎಂದು ಎಚ್ಚರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments