Homeಕರ್ನಾಟಕಮೋದಿ ತಾನೊಬ್ಬ ದೇವದೂತ ಎಂದು ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ: ಸಚಿವ ಹೆಚ್ ಸಿ ಮಹದೇವಪ್ಪ

ಮೋದಿ ತಾನೊಬ್ಬ ದೇವದೂತ ಎಂದು ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ: ಸಚಿವ ಹೆಚ್ ಸಿ ಮಹದೇವಪ್ಪ

ಬುದ್ಧ ಹುಟ್ಟಿದ ನಾಡಿನಲ್ಲಿ, ವಿಜ್ಞಾನ ತಂತ್ರಜ್ಞಾನವು ಇಷ್ಟೊಂದು ಮುಂದುವರೆದ ಕಾಲದಲ್ಲಿ ಪ್ರಧಾನಿ ಆಗಿರುವ ಮೋದಿಯವರು ತಾನೊಬ್ಬ ದೇವದೂತ ಎಂದು ಬಹಿರಂಗವಾಗಿ ಹೇಳುತ್ತಿರುವುದು ನಿಜಕ್ಕೂ ಹಾಸ್ಯಾಸ್ಪದ ಸಂಗತಿ ಎಂದು ಸಚಿವ ಹೆಚ್‌ ಸಿ ಮಹದೇವಪ್ಪ ಹೇಳಿದ್ದಾರೆ.

ಈ ಕುರಿತು ಟವರು ಮಾಧ್ಯಮ ಪ್ರಕಟಣೆ ಹೊರಡಿಸಿ, “ಪ್ರಧಾನಿಗಳು ಜನ ಸಾಮಾನ್ಯರ ದೂತರೇ ಹೊರತು, ದೇವದೂತರಲ್ಲ ಎಂಬುದನ್ನು ಅಧಿಕಾರದ ಕೊನೆಯ ಹಂತದಲ್ಲಿರುವ ಪ್ರಧಾನಿಗಳು ಅರ್ಥ ಮಾಡಿಕೊಳ್ಳಬೇಕು” ಎಂದಿದ್ದಾರೆ.

“ಇನ್ನು ವಿದೇಶಕ್ಕೆ ಹೋದಾಗಲೆಲ್ಲಾ ತಾನು ಬುದ್ಧನ ನಾಡಿನಿಂದ ಬಂದಿದ್ದೇನೆ ಎಂದು ಹೇಳಿಕೊಳ್ಳುವ ಪ್ರಧಾನಿಗಳು ಬುದ್ಧ ಹೇಳಿದ ವಿಚಾರಗಳನ್ನು ಓದಿ ತಿಳಿದುಕೊಳ್ಳಬೇಕು. ಇಲ್ಲದೇ ಇದ್ದಾಗ ಇಂತಹದ್ದೇ ಅರ್ಥವಿಲ್ಲದ, ಮೂಢನಂಬಿಕೆಯ ಮಾತುಗಳನ್ನೇ ಜನರು ಕೇಳಬೇಕಾಗುತ್ತದೆ” ಎಂದು ಕುಟುಕಿದ್ದಾರೆ.

“ಸಮಾನತೆ , ಸಾಮರಸ್ಯ ಮತ್ತು ಸೌಹಾರ್ದತೆಯ ಶತ್ರುವಾದ ಮೂಢನಂಬಿಕೆಯ ಮಾತುಗಳು ಪ್ರಜಾಪ್ರಭುತ್ವದ ಶತ್ರುಗಳು ಎಂಬುದನ್ನು ನಾನು ಮತ್ತೊಮ್ಮೆ ಹೇಳಬಯಸುತ್ತೇನೆ” ಎಂದಿದ್ದಾರೆ.

“ಬುದ್ದ ಪ್ರಪಂಚದ ಶ್ರೇಷ್ಠ ಸಂತ. ಆತನ ಬೋಧನೆಗಳ ಕುರಿತು ವಿಶ್ವದ ಮಹಾನ್ ವಿಜ್ಞಾನಿ ಆಲ್ಬರ್ಟ್ ಐನ್ ಸ್ಟೀನ್ ಅವರು ” ಮನುಕುಲದ ಉದ್ಧಾರಕ್ಕೆ ವಿಜ್ಞಾನವು ಅಗತ್ಯವಾಗಿರುವ ಹಾಗೆ ಮನುಕುಲದ ಉದ್ಧಾರಕ್ಕೆ ಬುದ್ಧನ ಉಪದೇಶಗಳೂ ಕೂಡಾ ಅಷ್ಟೇ ಉಪಯುಕ್ತವಾಗಿವೆ” ಎಂದು ಹೇಳುತ್ತಾರೆ. ಮನುಕುಲದ ಉದ್ಧಾರಕ್ಕಾಗಿ ಬಂದ ಬುದ್ಧ ಸ್ವಾರ್ಥಿಯಾಗದೇ ಮನುಷ್ಯರೆಲ್ಲರೂ ಸಮಾನರು ಎಂದು ಹೇಳಿ ಜಗದ ಕಣ್ಣು ತೆರೆಸಿದಾತ. ಎಲ್ಲರೂ ಆತನನ್ನು ದೇವರೆಂದು ಕರೆದರೂ ಕೂಡಾ ಆ ಕೂಗನ್ನು ಬದಿಗೊತ್ತಿ ಬಹಳಷ್ಟು ಸರಳವಾಗಿ ಜೀವಿಸಿದ್ಧ ಮಹಾವ್ಯಕ್ತಿ” ಎಂದು ಸ್ವಾಮಿ ವಿವೇಕಾನಂದರು ಹೇಳುತ್ತಾರೆ” ಎಂದು ತಿಳಿಸಿದ್ದಾರೆ.

“ಸ್ವತಃ ಗೌತಮ ಬುದ್ಧರೇ, ಎಷ್ಟೋ ಸಲ ಮಾತನಾಡುತ್ತಾ, ನಾನು ದೇವರೂ ಅಲ್ಲ, ದೇವದೂತನೂ ಅಲ್ಲ ಮಂತ್ರವಾದಿಯೂ ಅಲ್ಲ, ನಾನೂ ಕೂಡಾ ನಿಮ್ಮಂತೆಯೇ ಒಬ್ಬ ಮಹಾನ್ ವ್ಯಕ್ತಿ ಎಂದು ಅವರು ಹೇಳಿದ್ದರು. ಇದರ ಜೊತೆಗೆ ಬುದ್ಧನ ಬೋಧನೆಗಳೂ ಕೂಡಾ ಮೌಢ್ಯಕ್ಕೆ ವಿರುದ್ಧವಾಗಿ, ವೈಚಾರಿಕತೆಯ ಸಂದೇಶವನ್ನು ಸಾರುವಂತಹ ನಿಟ್ಟಿನಲ್ಲೇ ಸದಾ ಇವೆ” ಎಂದಿದ್ದಾರೆ.

“ಜನರಿಗೆ ನಿರಂತರವಾಗಿ ಸಹಾಯ ಮಾಡಿ ಅವರಿಂದಲೇ ಭಗವಾನ್ ಎಂದು ಕರೆಸಿಕೊಂಡ ಗೌತಮ ಬುದ್ಧರೇ ತನ್ನನ್ನು ತಾನು ಎಲ್ಲರಂತೆಯೇ ಸಾಮಾನ್ಯ ಎಂದು ಹೇಳಿಕೊಂಡಿರುವಾಗ ಜನರ ಬದುಕಿಗೆ ಎಲ್ಲ ರೀತಿಯಲ್ಲೂ ತೊಂದರೆ ಉಂಟು ಮಾಡಿ, ಅಸಮಾತೆಯ ಸಮಾಜದ ನಿರ್ಮಾಣದ ದಿಕ್ಕಿನೆಡೆ ಆಡಳಿತ ನಡೆಸಿರುವ ಮೋದಿಯವರು ತಮ್ಮನ್ನು ತಾವೇ ದೇವದೂತ ಎನ್ನುತ್ತಿರುವುದು ಮೂಢನಂಬಿಕೆಯ ಸಮಾಜದ ನಿರ್ಮಾಣದ ಸ್ಪಷ್ಟ ಹೆಜ್ಜೆ ಆಗಿದೆ” ಎಂದು ಟೀಕಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments