Homeಕರ್ನಾಟಕಕೌನ್ಸಿಲಿಂಗ್‌ ಮೂಲಕ ಪಿಡಿಒ ವರ್ಗಾವಣೆ: ಪ್ರಿಯಾಂಕ್‌ ಖರ್ಗೆ

ಕೌನ್ಸಿಲಿಂಗ್‌ ಮೂಲಕ ಪಿಡಿಒ ವರ್ಗಾವಣೆ: ಪ್ರಿಯಾಂಕ್‌ ಖರ್ಗೆ

ಗ್ರಾಮೀಣಾಭಿವೃದ್ಧಿ ಇಲಾಖೆಯ ಗ್ರಾಮ ಪಂಚಾಯತಿ ಅಧಿಕಾರಿಗಳು ಸೇರಿದಂತೆ ಹಲವು ನೌಕರರನ್ನು ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “ಹಿರಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತ್ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು ಗ್ರೇಡ್-2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳನ್ನು ಈ ವರ್ಷದಿಂದ ಕೌನ್ಸಿಲಿಂಗ್‌ ಮೂಲಕ ಮಾಡಲಾಗುವುದು” ಎಂದು ಹೇಳಿದ್ದಾರೆ.

“ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ತ್ವರಿತ ಸೇವಾ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆಯನ್ನು ಹೆಚ್ಚಿಸಲು ಪ್ರಸಕ್ತ ವರ್ಷದಿಂದ ವರ್ಗಾವಣೆಗಳಿಗೆ ಅನ್ವಯಿಸುವಂತೆ ಕೌನ್ಸಿಲಿಂಗ್‌ ಪದ್ಧತಿಯನ್ನು ಜಾರಿಗೊಳಿಸಲಾಗುವುದು ಎಂದು 2024-25 ಆಯವ್ಯಯದಲ್ಲಿ ಘೋಷಿಸಲಾಗಿತ್ತು. ಆ ಪ್ರಕಾರ ಈ ಸಂಬಂಧ ನಿಯಮಗಳನ್ನು ರೂಪಿಸಿದ ನಂತರ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು” ಎಂದು ಸಚಿವರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments