Homeಕರ್ನಾಟಕಕಾಂಗ್ರೆಸ್‌ ಸರಕಾರದಿಂದ ದಲಿತ ವಿರೋಧಿ ನೀತಿ: ಎ.ನಾರಾಯಣಸ್ವಾಮಿ ಆರೋಪ

ಕಾಂಗ್ರೆಸ್‌ ಸರಕಾರದಿಂದ ದಲಿತ ವಿರೋಧಿ ನೀತಿ: ಎ.ನಾರಾಯಣಸ್ವಾಮಿ ಆರೋಪ

ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಅನಾವರಣ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಗರಣಗಳಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಕೇಂದ್ರದ ಮಾಜಿ ಸಚಿವ ಎ ನಾರಾಯಣಸ್ವಾಮಿ ಆಗ್ರಹಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದ ಮುಖ್ಯಮಂತ್ರಿ ಮತ್ತು ಸರಕಾರವು ದಲಿತವಿರೋಧಿ ನೀತಿಯನ್ನು ಅನುಸರಿಸುತ್ತಿದ್ದು, ಅದನ್ನು ನಾವು ಖಂಡಿಸುತ್ತೇವೆ” ಎಂದರು.

“ಸಿದ್ದರಾಮಯ್ಯರಿಂದ ಸಮಾಜವಾದದ ಚಿಂತನೆಗಳು ಕಳಚಿ ಬಿದ್ದಿವೆ. ಸಮಾಜವಾದದ ಚಿಂತನೆ ಇದ್ದರೆ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಿರಲಿಲ್ಲ” ಎಂದು ಕಿಡಿಕಾರಿದರು.

“ರಾಜ್ಯದಲ್ಲಿ ಪರಿಶಿಷ್ಟ ಪಂಗಡದ 17 ಶಾಸಕರಿದ್ದಾರೆ. ಈ ಪೈಕಿ 16 ಜನರು ಕಾಂಗ್ರೆಸ್ಸಿನವರು ಎಂದು ಅವರು, 3 ಜನ ಲೋಕಸಭಾ ಸದಸ್ಯರು ಗೆದ್ದಿದ್ದಾರೆ. ವಾಲ್ಮೀಕಿ ನಿಗಮಕ್ಕೆ ಮಾರ್ಚ್ 21ರಂದು ರಾಜ್ಯ ಸರಕಾರವು 187 ಕೋಟಿ ಹಣವನ್ನು ವರ್ಗಾವಣೆ ಮಾಡಿತ್ತು. ಮೇ 26ರವರೆಗೆ ಚಂದ್ರಶೇಖರ್ ಅವರು ಆತ್ಮಹತ್ಯೆ ಮಾಡಿಕೊಳ್ಳುವವರೆಗೆ ರಾಜ್ಯದ ಮುಖ್ಯಮಂತ್ರಿಗಳ ಗಮನಕ್ಕೆ ಹಗರಣ ಬಂದಿಲ್ಲವಾದರೆ ಆ ಎರಡು ತಿಂಗಳು ಕರ್ನಾಟಕದಲ್ಲಿ ಸರಕಾರ ಇತ್ತೇ” ಎಂದು ಪ್ರಶ್ನಿಸಿದರು.

“ಅರಣ್ಯ ಪ್ರದೇಶದಲ್ಲಿ ವಾಸವಿರುವ ಜನಾಂಗದವರಿಗೂ ಈ ವಿಷಯದಲ್ಲಿ ರಾಜ್ಯದ ಮುಖ್ಯಮಂತ್ರಿಗಳ ಮೇಲೆ ಸಂದೇಹ ಉಂಟಾಗಿದೆ. ಹಗರಣದ ಚರ್ಚೆ ನಡೆದಾಗ ಸಚಿವರಿಗೂ ಹಗರಣಕ್ಕೂ ಸಂಬಂಧ ಇಲ್ಲ ಎಂದೇ ಮುಖ್ಯಮಂತ್ರಿಯವರು ಹೇಳಿದ್ದರು. ಎಸ್‍ಐಟಿ ರಚಿಸಿದ ಬಳಿಕ ಕೂಡ ಸಚಿವರು ನಿರಪರಾಧಿ ಎಂದೇ ಹೇಳಿದ್ದರು” ಎಂದು ಗಮನ ಸೆಳೆದರು.

“ವಿದ್ಯಾಸಿರಿ ನಿಲ್ಲಿಸಿದ್ದಾರೆ. ಶೂ ಕೊಡಲು ಯೋಗ್ಯತೆ ಇಲ್ಲ. ಮಕ್ಕಳಿಗೆ ಪುಸ್ತಕ ಕೊಡುತ್ತಿಲ್ಲ; ಹಾಸ್ಟೆಲ್‍ಗಳಲ್ಲಿ ಊಟವನ್ನೂ ನೀಡುತ್ತಿಲ್ಲ. ಹಲವು ಮಕ್ಕಳು ವಿದ್ಯಾಭ್ಯಾಸ ನಿಲ್ಲಿಸಿದ್ದಾರೆ” ಎಂದು ಟೀಕಿಸಿದರು.

“ಗ್ಯಾರಂಟಿಗಳ ಮೂಲಕ ನಿಗಮಗಳ ಕತ್ತನ್ನೇ ಹಿಸುಕಿದ್ದಾರೆ. ಜನಸಂದರ್ಶನದ ವೇಳೆ ಯುವಕರ ಕೊಟ್ಟ ಅರ್ಜಿಗಳನ್ನು ತಿಪ್ಪಗೆ ಎಸೆಯಲಾಗಿದೆ. ಇದು ಸಾಮಾಜಿಕ ಕಳಕಳಿಯನ್ನು ಅರ್ಥ ಮಾಡುವಂತಿದೆ” ಎಂದು ವ್ಯಂಗ್ಯವಾಡಿದರು.

ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ಎಸ್‍ಇಪಿ ಟಿಎಸ್‍ಪಿ ದಲಿತರ ಹಣ ದುರುಪಯೋಗದ ಬಗ್ಗೆ ನಾವು ಹಲವು ಬಾರಿ ಗಮನ ಸೆಳೆದಿದ್ದೇವೆ. ಕಳೆದ ಆರ್ಥಿಕ ವರ್ಷದಲ್ಲಿ ದಲಿತ ಸಮುದಾಯದ ಶ್ರೇಯೋಭಿವೃದ್ಧಿಗೆ ಮೀಸಲಿಟ್ಟಿದ್ದ 11,114 ಕೋಟಿ ರೂ.ಗಳನ್ನು ಈ ಸರಕಾರ ಬೇರೆ ಬೇರೆ ಕಾರ್ಯಗಳಿಗೆ ದುರುಪಯೋಗ ಪಡಿಸಿಕೊಂಡಿತ್ತು” ಎಂದು ಆಕ್ಷೇಪಿಸಿದರು.

“7ಡಿ ರದ್ದು ಮಾಡುವುದಾಗಿ ಹೇಳಿದ್ದರು. ಅದರಂತೆ 7 ಡಿ ರದ್ದು ಮಾಡಿದ್ದರು. ಆದರೂ, ದಲಿತರಿಗಾಗಿ ಮೀಸಲಿಟ್ಟ 14282 ಕೋಟಿ ರೂಗಳನ್ನು ಬೇರೆಡೆಗೆ ವರ್ಗಾಯಿಸಿದ್ದಾರೆ. 7 ಡಿ ರದ್ದು ಮಾಡಿದ್ದು, 7 ಸಿ ನಲ್ಲಿ ಗ್ಯಾರಂಟಿಗೆ ಹಣ ಕೊಡುತ್ತಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದರಲ್ಲದೆ, ಲೂಟಿ ಮಾಡುವುದಾದರೆ ಹಿಂದಿನ ಬಾಗಿಲಾದರೇನು, ಮುಂದಿನ ಬಾಗಿಲಾದರೆ ಏನು” ಎಂದು ವಾಗ್ದಾಳಿ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments