Homeಕರ್ನಾಟಕಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ | ಡಿಕೆ ಶಿವಕುಮಾರ್ ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್‌

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ | ಡಿಕೆ ಶಿವಕುಮಾರ್ ಅರ್ಜಿ ವಜಾಗೊಳಿಸಿ ಸುಪ್ರೀಂ ಕೋರ್ಟ್‌

ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ.

ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ‌ ಡಿಕೆ ಶಿವಕುಮಾರ್ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂಕೋರ್ಟ್​​ನ ನ್ಯಾ. ಬೇಲಾ ತ್ರಿವೇದಿ ಪೀಠ ತಿರಸ್ಕರಿಸಿದೆ.

ಪ್ರಕರಣ ರದ್ದುಗೊಳಿಸುವ ಸಂಬಂಧ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು 2023 ರ ಅಕ್ಟೋಬರ್ 19 ರಂದು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು. ಈ ಆದೇಶದ ವಿರುದ್ಧ ಶಿವಕುಮಾರ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಪೀಠ, ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದಿದೆ. ಅಲ್ಲದೆ ಮೂರು ತಿಂಗಳೊಳಗೆ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿದೆ.

ಪ್ರಕರಣ ಏನಿದು?

2013ರ ಏಪ್ರಿಲ್ 1 ರಿಂದ 2018 ರ ಏಪ್ರಿಲ್ 30 ಅವಧಿಯಲ್ಲಿ ಡಿ ಕೆ ಶಿವಕುಮಾರ್‌ ಅವರು ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ. 74.93 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಗಳಿಸಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.

2017ರಲ್ಲಿ ಶಿವಕುಮಾರ್ ಮನೆ ಮತ್ತು ಕಚೇರಿಗಳಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧ ಕಾರ್ಯಾಚರಣೆಗಳ ಆಧಾರದ ಮೇಲೆ, ಜಾರಿ ನಿರ್ದೇಶನಾಲಯ ಕೂಡ ವಿರುದ್ಧ ಡಿಕೆ ಶಿವಕುಮಾರ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿತ್ತು.

ಇ.ಡಿ ತನಿಖೆಯ ಆಧಾರದ ಮೇಲೆ ಸಿಬಿಐ ಅವರ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯ ಸರ್ಕಾರದಿಂದ ಅನುಮತಿ ಕೋರಿತ್ತು. ರಾಜ್ಯ ಸರ್ಕಾರವು 2019 ರ ಸೆಪ್ಟೆಂಬರ್ 25 ರಂದು ಅನುಮತಿ ನೀಡಿತ್ತು. ಅದರಂತೆ, ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ 2020 ರ ಅಕ್ಟೋಬರ್ 3 ರಂದು ಎಫ್ಐಆರ್ ದಾಖಲಿಸಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments