Homeಕರ್ನಾಟಕಬಿಜೆಪಿಯಲ್ಲಿದ್ದ ಖದೀಮರು ಈಗಲೂ ನಿಗಮಗಳಲ್ಲಿ ಇದ್ದಾರೆ: ಡಿಸಿಎಂ ಡಿ‌ ಕೆ ಶಿವಕುಮಾರ್

ಬಿಜೆಪಿಯಲ್ಲಿದ್ದ ಖದೀಮರು ಈಗಲೂ ನಿಗಮಗಳಲ್ಲಿ ಇದ್ದಾರೆ: ಡಿಸಿಎಂ ಡಿ‌ ಕೆ ಶಿವಕುಮಾರ್

ನಿಗಮಗಳಲ್ಲಿ ಕೆಲವು ಅಧಿಕಾರಿಗಳು ಖದೀಮರಾಗಿದ್ದಾರೆ. ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ. ಬಿಜೆಪಿ ಅವಧಿಯಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಅದೇ ಅಧಿಕಾರಿಗಳು ಈಗ ಇದ್ದು, ಡಿ ವರ್ಗದ ನೌಕರರನ್ನು ಎಂಡಿ ಮಾಡಿದ್ದಾರೆ. ಅಂತಹ ಪ್ರಕರಣಗಳನ್ನು ಪರಿಶೀಲನೆ ಮಾಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಕೆಪಿಸಿಸಿ ಕಚೇರಿಯ ಆವರಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಇನ್ನು ಮುಂದೆ ಆರ್ಥಿಕ ಇಲಾಖೆಯ ನಿಯಂತ್ರಣದಲ್ಲಿ ನಿಗಮಗಳ ಅನುದಾನ ಇಟ್ಟುಕೊಳ್ಳಲಾಗುವುದು” ಎಂದರು.

“ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕೋರ್ಟ್ ಆದೇಶ ಪಾಲನೆ ಹಾಗೂ ರಾಜ್ಯದ ರೈತರ ಹಿತ ರಕ್ಷಣೆ ಸಾಧ್ಯವಾಗುತ್ತಿದೆ” ಎಂದು ತಿಳಿಸಿದರು.

“ಇನ್ನೆರಡು ಮೂರು ದಿನಗಳಲ್ಲಿ ಕೆಆರ್ ಎಸ್ ಅಣೆಕಟ್ಟು ತುಂಬಲಿದ್ದು, ತಮಿಳುನಾಡಿನ ಪಾಲಿನ ನೀರನ್ನು ಹರಿಸಬಹುದಾದ ಸೂಚನೆ ವ್ಯಕ್ತವಾಗಿವೆ. ಇದರ ಜತೆಗೆ ನಮ್ಮ ರೈತರ ಹಿತಕಾಯಲು ಕೆರೆ ತುಂಬಿಸುವ ಕಾರ್ಯಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ” ಎಂದರು.

“ಮುಂಜಾಗೃತವಾಗಿ ರಂಗನತಿಟ್ಟು ಸೇರಿದಂತೆ ಇತರೆಡೆ ದೋಣಿ ವಿಹಾರ ಸ್ಥಗಿತಗೊಳಿಸಿದ್ದು, ಹೊಳೆಗಳ ಅಕ್ಕಪಕ್ಕದ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದೇವೆ. ಕರಾವಳಿ ಭಾಗದಲ್ಲಿ ಕೇರಳ ಮೂಲದ ಚಾಲಕ ವಾಹನ ಸಮೇತ, ಗುಡ್ಡ ಕುಸಿತಕ್ಕೆ ಸಿಲುಕಿದ್ದಾನೆ. ಮಳೆ ಮುಂದುವರಿದಿರುವ ಕಾರಣ ತೆರವು ಕಾರ್ಯಕ್ಕೆ ಅಡ್ಡಿಯುಂಟಾಗಿದೆ. ನಾವು ನಮ್ಮ ಪ್ರಯತ್ನ ಮಾಡುತ್ತಿದ್ದೇವೆ. ನಮ್ಮ ಸಚಿವರು ಶಾಸಕರು, ನಾಯಕರು ಸ್ಥಳದಲ್ಲಿದ್ದು, ಅವರ ಕರ್ತವ್ಯ ನಿಭಾಯಿಸುತ್ತಿದ್ದಾರೆ” ಎಂದು ಮಾಹಿತಿ ನೀಡಿದರು.

ಕುಮಾರಸ್ವಾಮಿ ಭೇಟಿಗೆ ಆಕ್ಷೇಪವಿಲ್ಲ

ಅಂಕೋಲಾ ಸೇರಿದಂತೆ ಇತರ ಕಡೆಗಳಿಗೆ ಕುಮಾರಸ್ವಾಮಿ ಭೇಟಿ ಬಗ್ಗೆ “ಅನಾಹುತ ನಡೆದ ಒಂದೇ ತಾಸಿನಲ್ಲಿ ನಮ್ಮ ಸಚಿವರನ್ನು ಸ್ಥಳಕ್ಕೆ ಕಳುಹಿಸಿದ್ದೇವೆ. ನಮ್ಮ ಸಚಿವರಾದ ಮಂಕಳಾ ವೈದ್ಯ, ಕೃಷ್ಣ ಬೈರೇಗೌಡರು ಸ್ಥಳಕ್ಕೆ ಹೋಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಿದೆ. ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾರೆ. ಅವರು ಭೇಟಿ ನೀಡಿರುವುದಕ್ಕೆ ನಮ್ಮ ಆಕ್ಷೇಪವಿಲ್ಲ” ಎಂದರು.

ಜಿಲ್ಲಾ, ಬ್ಲಾಕ್ ಅಧ್ಯಕ್ಷರ ಜತೆ ಚರ್ಚೆ

ಕಾಂಗ್ರೆಸ್ ಪಕ್ಷದ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ಬಗ್ಗೆ ಕೇಳಿದಾಗ, “ಬ್ಲಾಕ್ ಮಟ್ಟದಲ್ಲಿ ಪಕ್ಷವನ್ನು ಪುನರ್ ರಚನೆ ಮಾಡಬೇಕಿದೆ. ಹೀಗಿರುವ ಅಧ್ಯಕ್ಷರುಗಳು ಬಹಳ ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದಾರೆ. ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕಿದೆ. ಕೆಲವರಿಗೆ ಬಡ್ತಿ ನೀಡಬೇಕು. ಮತ್ತೆ ಕೆಲವರಿಗೆ ಜವಾಬ್ದಾರಿ ನೀಡಬೇಕಿದೆ” ಎಂದು ಹೇಳಿದರು.

“ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗೆ ನ್ಯಾಯಾಲಯ ಯಾವಾಗ ಬೇಕಾದರೂ ಸೂಚನೆ ನೀಡಬಹುದು. ಅವುಗಳಿಗೆ ತಯಾರಿ ಮಾಡಿಕೊಳ್ಳಬೇಕು. ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ. ಈ ಎಲ್ಲಾ ವಿಚಾರಗಳನ್ನು ಚರ್ಚೆ ಮಾಡಿ, ಮಾರ್ಗದರ್ಶನ ನೀಡಲು ಇಂದು ಜಿಲ್ಲಾ ಹಾಗೂ ಬ್ಲಾಕ್ ಮಟ್ಟದ ಅಧ್ಯಕ್ಷರ ಸಭೆ ಕರೆದಿದ್ದೇವೆ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments