Homeಕರ್ನಾಟಕವಿಧಾನಸಭೆ, ಪರಿಷತ್‌ನಲ್ಲಿ ಬಿಜೆಪಿ ಸದಸ್ಯರಿಂದ ಅಹೋರಾತ್ರಿ ಧರಣಿ

ವಿಧಾನಸಭೆ, ಪರಿಷತ್‌ನಲ್ಲಿ ಬಿಜೆಪಿ ಸದಸ್ಯರಿಂದ ಅಹೋರಾತ್ರಿ ಧರಣಿ

ಮುಡಾ ಹಗರಣದ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದು ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಸದನದಲ್ಲಿ ಪಟ್ಟು ಹಿಡಿಯಿತು.

ಆದರೆ ಸಭಾಧ್ಯಕ್ಷ ಯು ಟಿ ಖಾದರ್ ಅವರು ತನಿಖೆಯಲ್ಲಿ ಇರುವುದರಿಂದ ಅದಕ್ಕೆ ಚರ್ಚೆಗೆ ಅವಕಾಶ ನಿರಾಕರಿಸಿದರು. ಇದರಿಂದ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ಘೋಷಿಸಿದರು. ಈಗ ಬಿಜೆಪಿ ನಾಯಕರು ಸದನದ ಬಾವಿಗಿಳಿದು ರಾಜ್ಯ ಕಾಂಗ್ರೆಸ್ ಸರ್ಕಾರದ ಹಗರಣಗಳನ್ನು ಕೂಗಿ ಹೇಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸದನದ ಬಾವಿಯಲ್ಲಿ ಕುಳಿತಿರುವ ಬಿಜೆಪಿ ನಾಯಕರು ಸಮಯವನ್ನು ಕಳೆಯಲು ಹನುಮಾನ್ ಚಾಲೀಸಾ ಭಜನೆ ಮಾಡುತ್ತಿದ್ದಾರೆ. ಹಾಗೆಯೇ ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಹಗರಣಗಳನ್ನು ಕೂಗಿ ಹೇಳಿ ಗೋವಿಂದ, ಗೋವಿಂದ ಎಂದು ಘೋಷಣೆ ಕೂಗುತ್ತಿದ್ದಾರೆ.

ವಿಧಾನ ಪರಿಷತ್ ಸದಸ್ಯ ಎಸ್‌ ಎಲ್ ಬೋಜೇಗೌಡ ಅವರು ಅಕ್ರಮಗಳಿಗೆ ಜೋಡಿಸಿ ‘ಅನ್ಯಾಯ ಕಾರಿ ಬ್ರಹ್ಮ’ ಗೀತೆ ಹಾಡಿದರು. ಈ ವೇಳೆ ಬಿಜೆಪಿ ನಾಯಕರು ನಗೆ ಬೀರಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments