Homeಕರ್ನಾಟಕಸಿದ್ದರಾಮಯ್ಯರನ್ನು ಕೆಳಗಿಳಿಸಲು ಡಿಕೆಶಿ ಹೂಡಿರುವ ತಂತ್ರವೇ ವಿಜಯೇಂದ್ರ ಪಾದಯಾತ್ರೆ: ಯತ್ನಾಳ್‌ ಬಾಂಬ್‌

ಸಿದ್ದರಾಮಯ್ಯರನ್ನು ಕೆಳಗಿಳಿಸಲು ಡಿಕೆಶಿ ಹೂಡಿರುವ ತಂತ್ರವೇ ವಿಜಯೇಂದ್ರ ಪಾದಯಾತ್ರೆ: ಯತ್ನಾಳ್‌ ಬಾಂಬ್‌

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಡಿ ಕೆ ಶಿವಕುಮಾರ್ ಸಲಹೆ ಮೇರೆಗೆ ಬಿ ವೈ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿ, ” ಡಿ ಕೆ ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಲು ಬಿ ವೈ ವಿಜಯೇಂದ್ರ ಕೈಜೋಡಿಸಿದ್ದಾರೆ ಎಂದು ದೂರಿದರು.

“ಡಿ ಕೆ ಶಿವಕುಮಾರ್ ಆದೇಶದಂತೆ ಸಿದ್ದರಾಮಯ್ಯ ‌ ವಿರುದ್ಧ ವಿಜಯೇಂದ್ರ ಪಾದಯಾತ್ರೆ ಮಾಡಲು ಸಿದ್ಧರಾಗಿದ್ದಾರೆ. ಈ ಪಾದಯಾತ್ರೆ ಹೊಂದಾಣಿಕೆ ರಾಜಕಾರಣವಾಗಿದೆ. ಡಿ ಕೆ ಶಿವಕುಮಾರ್ ಅವರ ಉಪಕಾರ ತೀರಿಸಲಿಕ್ಕೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ” ಎಂದರು.

“ಮುಡಾ ಮಾಜಿ ಅಧ್ಯಕ್ಷ ಹೆಚ್ ವಿ ರಾಜೀವ್ ಬಿಜೆಪಿಯಲ್ಲೇ ಇದ್ದಾಗ ಈ ಹಗರಣ ನಡೆದಿದೆ. ಈಗ ಅವರು ಕಾಂಗ್ರೆಸ್ ಸೇರಿದ್ದಾರೆ. ಕಾಂಗ್ರೆಸ್​ ಯಾಕೆ ಸೇರಿದ್ದಾರೆ ಅಂದರೆ ಇದೆಲ್ಲ ಮುಚ್ಚಿ ಹಾಕಲು. ರಾಜೀವ್ ಯಾರ ನಿರ್ದೇಶನದ ಮೇಲೆ ಕಾಂಗ್ರೆಸ್ ಸೇರಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನಗಿರುವ ಮಾಹಿತಿ ಪ್ರಕಾರ ಮುಡಾ ವಿಚಾರ ವಿಜಯೇಂದ್ರ ನಡೆಸುತ್ತಿರುವ ಹೋರಾಟದ ಹಿಂದೆ ಡಿ ಕೆ ಶಿವಕುಮಾರ್ ಕೈವಾಡವಿದೆ” ಎಂದು ಹೊಸ ಬಾಂಬ್‌ ಸಿಡಿಸಿದ್ದಾರೆ.

“ನಾವು ಮತ್ತು ರಮೇಶ್ ಜಾರಕಿಹೊಳಿ‌ ಕೇಂದ್ರದಿಂದ ಒಪ್ಪಿಗೆ ಪಡೆದು ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಎಲ್ಲಿಂದ ಪ್ರತಿಭಟನೆ ಮಾಡಬೇಕೆಂದು ಇನ್ನೂ ನಿರ್ಣಯವಾಗಿಲ್ಲ. ಬಿಜೆಪಿಯಲ್ಲಿ ಎರಡು ಬಣ ಇಲ್ಲ. ನಮ್ಮ ಪ್ರತಿಭಟನೆ ಪಕ್ಷದ ಪ್ರತಿಭಟನೆ” ಎಂದು ಹೇಳಿದರು.

“ಮಹರ್ಷಿ ವಾಲ್ಮೀಕಿ ನಿಗಮದಲ್ಲೂ ದೊಡ್ಡ ಹಗರಣ ನಡೆದಿದೆ. ಒಂದು ಸಮುದಾಯದಕ್ಕೆ ಹೋಗಬೇಕಾದ ಹಣ ಪೂರ್ತಿ ನುಂಗಿ ಹಾಕಿದ್ದಾರೆ. ಇನ್ನೊಂದು ಕಡೆ ಮುಡಾದಲ್ಲಿ ಒಬ್ಬ ದಲಿತನ ಜಮೀನು ಪೂರ್ತಿ ನುಂಗಿ ಹಾಕಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರ ವಿರುದ್ದ ಯಾವುದೇ ಒಳ ಒಪ್ಪಂದ ಇಲ್ಲದೇ ನಾವು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟ ಭ್ರಷ್ಟರ ವಿರುದ್ದ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments