Homeಕರ್ನಾಟಕಮೈಸೂರಿನಲ್ಲಿ 600 ಕೋಟಿ ರೂ. ಹೂಡಿಕೆ, ಐದು ಸಾವಿರ ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್ ಖರ್ಗೆ

ಮೈಸೂರಿನಲ್ಲಿ 600 ಕೋಟಿ ರೂ. ಹೂಡಿಕೆ, ಐದು ಸಾವಿರ ಉದ್ಯೋಗ ಸೃಷ್ಟಿ: ಸಚಿವ ಪ್ರಿಯಾಂಕ್ ಖರ್ಗೆ

ಮೈಸೂರಿನಲ್ಲಿ ಸೆಮಿಕಂಡಕ್ಟರ್, ಎಲಿಮೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ ಮತ್ತು ಘಟಕ ಗೋದಾಮುಗಳು ಸೇರಿದಂತೆ 20ಕ್ಕೂ ಹೆಚ್ಚು ಇಎಸ್‌ಡಿಎಂ ಕಂಪನಿಗಳು ಕ್ಲಸ್ಟರ್‌ಗೆ ಸೇರ್ಪಡೆಗೊಳ್ಳುತ್ತಿದ್ದು ಸುಮಾರು 600ಕೋಟಿ ರೂ. ಬಂಡವಾಳ ಹೂಡಿಕೆ ಹರಿದು ಬಂದಿದೆ ಎಂದು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, “150 ಎಕರೆಗಳಷ್ಟು ಪಿಸಿಬಿ ಕ್ಲಸ್ಟರ್ ಅನ್ನು ಸ್ಥಾಪಿಸುವ ಉದ್ದೇಶದಿಂದ ಪ್ರಸ್ತುತ ಪರೀಕ್ಷಾ ಸೌಲಭ್ಯವನ್ನು ವಿಸ್ತರಿಸಲು, ಮಲ್ಟಿಟೆನೆನ್ಸಿ ಕ್ಲೀನ್ ರೂಮ್‌ಅನ್ನು ಸೇರಿಸಲು ಉದ್ದೇಶಿಸಿದ್ದೇವೆ. ಇದು 5000 ಹೊಸ ಉದ್ಯೋಗ ಸೃಷ್ಟಿಗೆ ನೆರವಾಗಲಿದೆ” ಎಂದಿದ್ದಾರೆ.

“ಮಹಿಳಾ ಉದ್ಯೋಗಿಗಳನ್ನು ಸಬಲೀಕರಣಗೊಳಿಸಲು ಸಹಕಾರವಾಗಲಿದೆ. ಈ ಎಲ್ಲ ಬೆಳವಣಿಗೆಯಿಂದ ಜಾಗತಿಕ ಕಂಪನಿಗಳು ಮೈಸೂರಿನಲ್ಲಿ ಬೆಳೆಯಲು ಇದು ಉತ್ತಮ ಸಮಯವಾಗಿದೆ” ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

“ಕರ್ನಾಟಕ ಇಎಸ್‌ಡಿಎಂ (ಎಲೆಕ್ಟ್ರಾನಿಕ್ಸ್ ಸಿಸ್ಟಂಸ್ ಡಿಸೈನ್ ಮತ್ತು ತಯಾರಿಕೆ) ವಲಯದಲ್ಲಿ ಕರ್ನಾಟಕವನ್ನು ಜಾಗತಿಕ ನಾಯಕನನ್ನಾಗಿಸುವ ಗುರಿ ಹೊಂದಲಾಗಿದೆ. ವಿಶ್ವ ಮಟ್ಟದಲ್ಲಿ ಹೂಡಿಕೆಗಳ ಹರಿವು ಹೆಚ್ಚಿಸುವುದು, ಹೊಸ ಉದ್ಯಮಗಳನ್ನು ಆರಂಭಿಸಲು ಉತ್ತೇಜನ ನೀಡುವುದು ಮತ್ತು ರಾಜ್ಯದಲ್ಲಿ ಪ್ರಾರಂಭಿಸಿರುವ ಉದ್ಯಮಗಳನ್ನು ಉಳಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುವುದು ಸರ್ಕಾರದ ಉದ್ದೇಶ” ಎಂದು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments