Homeಕರ್ನಾಟಕಬಿಎಸ್‌ವೈ ಪೋಕ್ಸೋ ಪ್ರಕರಣ | ಹೈಕೋರ್ಟ್‌ ತಡೆಯಾಜ್ಞೆಗೆ ತೆರವಿಗೆ ಸೂಚನೆ: ಸಚಿವ ಪರಮೇಶ್ವರ್

ಬಿಎಸ್‌ವೈ ಪೋಕ್ಸೋ ಪ್ರಕರಣ | ಹೈಕೋರ್ಟ್‌ ತಡೆಯಾಜ್ಞೆಗೆ ತೆರವಿಗೆ ಸೂಚನೆ: ಸಚಿವ ಪರಮೇಶ್ವರ್

ಬಿ ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ ಹೈಕೋರ್ಟ್‌ ನೀಡಿರುವ ತಡೆಯಾಜ್ಞೆಯನ್ನು ತೆರವು ಮಾಡಿಸಲು ಅಡ್ವೋಕೇಟ್ ಜನರಲ್‌ಗೆ ತಿಳಿಸಲಾಗಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಕಾಲದಲ್ಲಿ ಸಾಕಷ್ಟು ಹಗರಣಗಳಾಗಿವೆ. ತನಿಖೆಗೆ ಆದೇಶ ಮಾಡಿದ್ದೇವೆ. ವರದಿಯನ್ನು ಆಧರಿಸಿ ಮುಂದಿನ ಕ್ರಮದ ಬಗ್ಗೆ ಕ್ಯಾಟಿನೆಟ್‌ನಲ್ಲಿ ನಿರ್ಧರಿಸುತ್ತೇವೆ” ಎಂದು ತಿಳಿಸಿದರು.

“ಮುಡಾ ಪ್ರಕರಣವನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡುವುದಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ, ಕಾನೂನು ಹೋರಾಟ ನಡೆಸುತ್ತೇವೆ. ಕಾನೂನು ಹೋರಾಟ ಪ್ರಾರಂಭವಾದ ಬಳಿಕ ಮುಂದಿನ ಬೆಳವಣಿಗೆ ಏನೆಂಬುದನ್ನು ಗಮನಿಸಿ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ನಿರ್ಧರಿಸಲಾಗುವುದು”‌ ಎಂದರು.

“ಹತ್ತಾರು ಪ್ರಕರಣಗಳು ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಉಳಿದಿವೆ. ಯಾವುದಕ್ಕೂ ಕೂಡ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಮುಂದಾಗಿಲ್ಲ. ಮುಡಾ ವಿಚಾರದಲ್ಲಿ ತುರಾತುರಿಯಲ್ಲಿ ನೋಟಿಸ್ ನೀಡಿದ್ದಾರೆ. ಇದರ ಹಿಂದಿನ ಉದ್ದೇಶ ಏನೆಂಬುದನ್ನು ರಾಜ್ಯಪಾಲರು ಹೇಳಬೇಕಲ್ಲವೇ” ಎಂದು ಮರುಪ್ರಶ್ನಿಸಿದರು.

“ರಾಜ್ಯಪಾಲರು ಸಾಮಾನ್ಯ ರಾಜಕಾರಣಿಯೋ ಅಥವಾ ಅಧಿಕಾರಿಯೋ ಅಲ್ಲ. ಸಂವಿಧಾನದ ಮುಖ್ಯಸ್ಥರು. ಅನೇಕ ಪ್ರಕರಣಗಳು ಅವರ ಕಚೇರಿಯಲ್ಲಿ ಬಾಕಿ ಉಳಿದು, ಯಾವುದಕ್ಕು ಗಮನ ಹರಿಸದೇ ಏಕಾಏಕಿ ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಹಿಂದೆ ಷಡ್ಯಂತ್ರ ಇದೆ. ರಾಜ್ಯಪಾಲರ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡುತ್ತೇವೆ” ಎಂದರು.

ಕೆಲವು ದಿನಗಳಲ್ಲಿ ಸರ್ಕಾರದಲ್ಲಿ ಯಾರು ಎಲ್ಲೆಲ್ಲಿರಬೇಕು, ಏನೇನಾಗುತ್ತದೆ ಎಂದು ಕಾದು ನೋಡಿ ಎಂದು ಕುಮಾರಸ್ವಾಮಿ ಹೇಳಿಕೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಲಿ ನಮ್ಮದೇನು ತಕಾರಾರು ಇಲ್ಲ. ಅದಕ್ಕು ಮುನ್ನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಿ. ಬೇರೆ ಬೇರೆ ಪ್ರಕರಣಗಳ ಕುರಿತು ತನಿಖೆ ಆಗುತ್ತಿದೆ. ದೇವರಾಜು ಅರಸು ಟ್ರಕ್ ಟರ್ಮಿನಲ್‌ನಲ್ಲಿ 47 ಕೋಟಿ ರೂ. ಚೆಕ್ ಮೂಲಕ ಪಡೆದುಕೊಂಡಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅಧಿಕಾರಿಗಳನ್ನು ಬಂದಿಸಲಾಗಿದೆ. ಗಮನದಲ್ಲಿ ಇತ್ತು, ಇರಲಿಲ್ಲ ಎಂಬುದರ ಕುರಿತು ಬಿಜೆಪಿಯವರು ಉತ್ತರಿಸಲಿ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments