Homeಕರ್ನಾಟಕರಾಷ್ಟ್ರ ಧ್ವಜಾರೋಹಣಕ್ಕೆ ರಾಜ್ಯದ ಆರು ಮಂದಿ ಗ್ರಾ.ಪಂ. ಮಹಿಳಾ ಅಧ್ಯಕ್ಷರಿಗೆ ಆಹ್ವಾನ

ರಾಷ್ಟ್ರ ಧ್ವಜಾರೋಹಣಕ್ಕೆ ರಾಜ್ಯದ ಆರು ಮಂದಿ ಗ್ರಾ.ಪಂ. ಮಹಿಳಾ ಅಧ್ಯಕ್ಷರಿಗೆ ಆಹ್ವಾನ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ಆಮಂತ್ರಣಗೊಂಡಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ವಿಶೇಷ ಆಹ್ವಾನಿತರಾಗಿ ಆಮಂತ್ರಣಗೊಂಡಿರುವ ಮಹಿಳಾ ಅಧ್ಯಕ್ಷರನ್ನು ಅಭಿನಂದಿಸಿ, ಮಾಹಿತಿ ಹಂಚಿಕೊಂಡಿರುವ ಅವರು, ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಗೆದರೆ ಗ್ರಾ.ಪಂ. ಅಧ್ಯಕ್ಷೆ ಕುಮಾರಿ ಲಕ್ಷ್ಮಿನರಸಮ್ಮ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪೆರುವಾಯಿ ಗ್ರಾ.ಪಂ. ಅಧ್ಯಕ್ಷೆ ನಫೀಜಾ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಕಮತನೂರು ಗ್ರಾ.ಪಂ. ಅಧ್ಯಕ್ಷೆ ರಾಜೇಶ್ವರಿ ಗುತ್ತಿ, ಕಲಬುರಗಿ ಜಿಲ್ಲೆಯ ತಾಜ್ ಸುಲ್ತಾನಪುರ ಗ್ರಾ.ಪಂ. ಉಪಾಧ್ಯಕ್ಷೆ ಜಯಶ್ರೀ, ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕಾನೂರು ಗ್ರಾ.ಪಂ. ಅಧ್ಯಕ್ಷೆ ದೇವಿ ಪಿ ಟಿ ಮತ್ತು ಚಾಮರಾಜನಗರ ತಾಲ್ಲೂಕಿನ ಅಟ್ಟಗುಳಿಪುರ ಗ್ರಾ.ಪಂ. ಅಧ್ಯಕ್ಷೆ ಶಿವಮ್ಮ ನಾಳೆ ದೆಹಲಿಯಲ್ಲಿ ನಡೆಯಲಿರುವ ಸ್ವಾತಂತ್ರ್ಯೋತ್ಸವದಲ್ಲಿ ಭಾಗವಹಿಸುತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ನೇತೃತ್ವದಲ್ಲಿ ಈ ತಂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದೆ ಎಂದು ತಿಳಿಸಿದ್ದಾರೆ.

“ಈ ಆರೂ ಮಂದಿ ಉತ್ತಮ ಆಡಳಿತ, ಪರಿಸರ ಕಾಳಜಿ, ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ, ತೆರಿಗೆ ಸಂಗ್ರಹಣೆ, ನೀರು ಸರಬರಾಜು ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಅತ್ಯಂತ ಬದ್ಧತಾಪೂರ್ವಕವಾಗಿ ನಿರ್ವಹಿಸಿ ಈ ಗೌರವಕ್ಕೆ ಪಾತ್ರರಾಗಿರುವುದು ಕರ್ನಾಟಕಕ್ಕೆ ಹೆಮ್ಮೆ ತಂದಿದೆ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments