Homeಕರ್ನಾಟಕಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು ಬಂದಿರುವ ಅವರು ಹೆದರುವವರಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಕಲಬುರಗಿಯಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯ ಎಲ್ಲಿ ಹೆದರಿದ್ದಾರೆ? ಶೆಟ್ಟರ್ ಅವರಿಗೆ ಹೆದರಿಕೆ ಇರಬೇಕು. ನಾವು ಈ ನೆಲದ ಕಾನೂನಿಗೆ ಗೌರವ ನೀಡುತ್ತೇವೆ. ಸಿಎಂ ಅವರ ತಪ್ಪು ಇಲ್ಲದಿರುವ ಕಾರಣಕ್ಕೆ ಹೈಕೋರ್ಟ್ ತನಿಖೆಗೆ ತಡೆ ನೀಡಿದೆ. ಈ ಹಿಂದೆ ರಚನೆ ಮಾಡಿರುವ ಆಯೋಗದಂತೆ ನ್ಯಾಯಾಂಗ ತನಿಖೆ ನಡೆಯಲಿದೆ” ಎಂದು ತಿಳಿಸಿದರು.

ಐದು ವರ್ಷವೂ ಸಿದ್ದರಾಮಯ್ಯ ಐದು ವರ್ಷದ ಅವಧಿ ಪೂರ್ಣಗೊಳಿಸುತ್ತಾರೆಯೇ ಎಂದು ಪ್ರಶ್ನಿಸಿದಾಗ “ನಮ್ಮ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ 10 ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತದೆ” ಎಂದರು.

ರಾಜ್ಯಪಾಲರು ದಲಿತ ಎನ್ನುವ ಕಾರಣಕ್ಕೆ ಕಾಂಗ್ರೆಸ್ ಅವಮಾನ ಮಾಡುತ್ತಿದೆ ಎಂದು ಕೇಳಿದಾಗ “ಅವರನ್ನು ರಾಜ್ಯಪಾಲರ ಹುದ್ದೆಗೆ ಕೂರಿಸಿರುವುದು ಸಂವಿಧಾನವೇ ಹೊರತು ಜಾತಿಯಲ್ಲ” ಎಂದರು.

ರಾಜ್ಯಪಾಲರನ್ನು ನಿಂದಿಸಿದವರ ಮೇಲೆ ಪೊಲೀಸರು ಸ್ವಯಂಪ್ರೇರಿತರಾಗಿ ಎಸ್ ಇ, ಎಸ್ ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎನ್ನುವ ವಿರೋಧ ಪಕ್ಷಗಳ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಕಲಬುರ್ಗಿಯಲ್ಲಿ ನಿರ್ಮಾಣವಾಗಿರುವ ಹೊಸ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಬಂದು ಸೇರಿಸಲು ಹೇಳಿ” ಎಂದು ವ್ಯಂಗ್ಯವಾಡಿದರು.

“2011ರಲ್ಲಿ ಯಡಿಯೂರಪ್ಪ ಅವರನ್ನು ಜೈಲಿಗೆ ಹಾಕಿಸಲಾಯಿತು ಈಗ ಅದೇ ಸನ್ನಿವೇಶ ಸೃಷ್ಟಿಯಾಗಿದೆ ಎನ್ನುವ ಬಿಜೆಪಿ ಸಾಮಾಜಿಕ ಜಾಲತಾಣದ ಪೋಸ್ಟಿನ ಬಗ್ಗೆ ಕೇಳಿದಾಗ, “ಅವರನ್ನು ಜೈಲಿಗೆ ಹಾಕಿಸಿದ್ದು ಕಾಂಗ್ರೆಸ್ ಅಲ್ಲ. ಇದೇ ದೇವೇಗೌಡರು, ಕುಮಾರಸ್ವಾಮಿ ನಾವಲ್ಲ” ಎಂದು ಹೇಳಿದರು.

ಕುಮಾರಸ್ವಾಮಿ ಅವರ ವಿರುದ್ದ ಲೋಕಾಯುಕ್ತ ದೋಷಾರೋಪ ಪಟ್ಟಿ ಸಲ್ಲಿಕೆಗೆ ರಾಜ್ಯಪಾಲರ ಅನುಮತಿ ಕೇಳಿರುವ ವಿಚಾರದ ಬಗ್ಗೆ ಪ್ರಶ್ನಿಸಿದಾಗ, “ಇದರ ಬಗ್ಗೆ ನನಗೆ ಮಾಹಿತಿಯಿಲ್ಲ. ಸ್ವತಃ ನನ್ನ ಕಣ್ಣಿನಿಂದ ನೋಡಬೇಕು. ಯಾವುದಾದರೂ ದಾಖಲೆ ಇದ್ದರೆ ನೀಡಿ. ನಾನು (ಮಾಧ್ಯಮದವರನ್ನು) ನಿಮ್ಮನ್ನು ಆಶ್ರಯಿಸಲು ಆಗುವುದಿಲ್ಲ” ಎಂದರು.

ಸಿಎಂ ದೆಹಲಿ ಭೇಟಿಯ ಬಗ್ಗೆ ಕೇಳಿದಾಗ “ಹೈಕಮಾಂಡಿಗೆ ವಾಸ್ತವಾಂಶ ತಿಳಿಸಬೇಕು ಎಂದು ಇಬ್ಬರೂ ಮಾತನಾಡಿಕೊಂಡಿದ್ದೆವು. ಅದಕ್ಕೆ ದೆಹಲಿಗೆ ಇಬ್ಬರೂ ತೆರಳೋಣ ಎಂದು ಮಾತುಕತೆ ನಡೆಸಿದ್ದೇವೆ” ಎಂದರು.

ಬಿಜೆಪಿ ಹೊರತಾದ ಪಕ್ಷಗಳು ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪದ ವಿರುದ್ದ ಹೋರಾಟ ರೂಪಿಸಲು ಎಲ್ಲರನ್ನು ಒಗ್ಗೂಡಿಸಲು ದೆಹಲಿಗೆ ಸಿದ್ದರಾಮಯ್ಯ ಬೇಟಿ ನೀಡುತ್ತಿದ್ದಾರೆ ಎಂದಾಗ “ಮಾಧ್ಯಮಗಳಲ್ಲಿಯೇ ಎಲ್ಲವೂ ಬರುತ್ತಿದೆ. ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಎಲ್ಲೆಲ್ಲಿ ಏನಾಗುತ್ತಿದೆ ಎಂಬುದು ನೀವು (ಮಾಧ್ಯಮಗಳು) ನೋಡಿದಲ್ಲವೇ?” ಎಂದು ಮರು ಪ್ರಶ್ನಿಸಿದರು.

ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಬೆಂಬಲಿಸಬೇಕು ಎನ್ನುವ ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಕೇಳಿದಾಗ “ಇಡೀ ಪಕ್ಷ, ಮಲ್ಲಿಕಾರ್ಜುನ ಖರ್ಗೆ ಅವರು, ರಾಹುಲ್ ಗಾಂಧಿ ಅವರು ಎಲ್ಲಾ ನಾಯಕರು ಅವರ ಪರವಾಗಿ ನಿಂತಿದ್ದೇವೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments