Homeಕರ್ನಾಟಕರಾಹುಲ್ ಖರ್ಗೆ ಟ್ರಸ್ಟ್‌ಗೆ ನಿಯಮ ಪ್ರಕಾರ ಸಿ.ಎ. ನಿವೇಶನ: ಸಚಿವ ಎಂ ಬಿ ಪಾಟೀಲ್ ಸ್ಪಷ್ಟನೆ

ರಾಹುಲ್ ಖರ್ಗೆ ಟ್ರಸ್ಟ್‌ಗೆ ನಿಯಮ ಪ್ರಕಾರ ಸಿ.ಎ. ನಿವೇಶನ: ಸಚಿವ ಎಂ ಬಿ ಪಾಟೀಲ್ ಸ್ಪಷ್ಟನೆ

‌ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಏರೋಸ್ಪೇಸ್ ಪಾರ್ಕ್‌ನಲ್ಲಿ ಸಿ.ಎ. ನಿವೇಶನವನ್ನು ಕಾನೂನಿನ ಪ್ರಕಾರವೇ ನಿಗದಿತ ಬೆಲೆಗೆ ಕೊಡಲಾಗಿದೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

ಸೋಮವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ರಾಹುಲ್‌ ಖರ್ಗೆ ಅವರು ಅಲ್ಲಿ ಸಂಶೋಧನೆ ಮತ್ತು ತರಬೇತಿ ಕೇಂದ್ರ ಸ್ಥಾಪಿಸುವುದಾಗಿ ಹೇಳಿದ್ದಾರೆ. ಇದರಲ್ಲಿ ಬಿಜೆಪಿ ನಾಯಕ ಲೆಹರ್ ಸಿಂಗ್ ಆರೋಪಿಸಿರುವಂತೆ ಯಾವ ನಿಯಮವೂ ಉಲ್ಲಂಘನೆ ಆಗಿಲ್ಲ” ಎಂದರು.

“ರಾಹುಲ್ ಖರ್ಗೆ ಅವರು ಐಐಟಿ ಪದವೀಧರರಾಗಿದ್ದಾರೆ. ಅವರ ಕುಟುಂಬವು ನಾನಾ ಬಗೆಯ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ. ಕೆಐಎಡಿಬಿ ನಿಯಮಗಳ ಪ್ರಕಾರ ಸಿ.ಎ ನಿವೇಶನಗಳಲ್ಲಿ ಆರ್ & ಡಿ ಕೇಂದ್ರಗಳು, ಉತ್ಕೃಷ್ಟತಾ ಕೇಂದ್ರಗಳು, ತಾಂತ್ರಿಕ ಸಂಸ್ಥೆಗಳು, ಕೌಶಲ್ಯಾಭಿವೃದ್ಧಿ, ಸರಕಾರಿ ಕಚೇರಿಗಳು, ಬ್ಯಾಂಕು, ಆಸ್ಪತ್ರೆ, ಹೋಟೆಲ್, ಪೆಟ್ರೋಲ್ ಬಂಕ್, ಕ್ಯಾಂಟೀನ್, ವಸತಿ ಸೌಲಭ್ಯ ಇತ್ಯಾದಿಗಳ ಅಭಿವೃದ್ಧಿಗೆ ಅವಕಾಶವಿದೆ. ಆಸಕ್ತರು ಯಾರು ಬೇಕಾದರೂ ಇದಕ್ಕೆ ಪ್ರಯತ್ನಿಸಬಹುದು” ಎಂದು ಹೇಳಿದರು.

“ರಾಜ್ಯ ಮಟ್ಟದ ಏಕಗವಾಕ್ಷಿ ಸಮಿತಿಯ ಶಿಫಾರಸಿನ ನಂತರವಷ್ಟೇ ಇವುಗಳ ಹಂಚಿಕೆಯಾಗುತ್ತದೆ. ಏರೋಸ್ಪೇಸ್ ಪಾರ್ಕಿನಲ್ಲಿ ರಾಹುಲ್ ಅವರಿಗೆ ಕೈಗಾರಿಕಾ ನಿವೇಶನವನ್ನೇನೂ ಕೊಟ್ಟಿಲ್ಲ. ಬದಲಿಗೆ, ಸಿ.ಎ.ನಿವೇಶನವನ್ನು ಆರ್ ಆ್ಯಂಡ್ ಡಿ ಕೇಂದ್ರ ಸ್ಥಾಪನೆಗಾಗಿ ನಿಗದಿತ ಬೆಲೆಗೇ ಕೊಡಲಾಗಿದೆ. ಇದರಲ್ಲಿ ಅವರಿಗೆ ಯಾವ ರಿಯಾಯಿತಿಯನ್ನೂ ನೀಡಿಲ್ಲ” ಎಂದು ಸ್ಪಷ್ಟಪಡಿಸಿದರು.

“ಈ ಹಿಂದೆ ಬಿಜೆಪಿ ಸರಕಾರದಲ್ಲಿ ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಕೈಗಾರಿಕಾ ಪ್ರದೇಶದಲ್ಲೇ 116 ಎಕರೆಯನ್ನು ಬರೀ 50 ಕೋಟಿ ರೂ.ಗೆ ಕೊಡಲಾಗಿದೆ. ಅದರಿಂದ 137 ಕೋಟಿ ರೂ. ಬೊಕ್ಕಸಕ್ಕೆ ನಷ್ಟವಾಗಿದೆ. ಲೆಹರ್ ಸಿಂಗ್ ಅವರು ಈ ಬಗ್ಗೆಯೂ ಚಕಾರ ಎತ್ತಬಹುದಲ್ಲವೇ” ಎಂದು ಪ್ರಶ್ನಿಸಿದರು.

“ಹಿಂದೆಲ್ಲ ಕೆಐಎಡಿಬಿ ಮಂಡಳಿಯೇ ಸಿ.ಎ. ನಿವೇಶನಗಳನ್ನು ಹಂಚುತ್ತಿತ್ತು. ಆದರೆ, ನಾನು ಸಚಿವನಾದ ಮೇಲೆ ರಾಜ್ಯಮಟ್ಟದ ಏಕ ಗವಾಕ್ಷಿ ಸಮಿತಿ ಅನುಮೋದನೆ ನೀಡುವ ಹಾಗೆ ಪಾರದರ್ಶಕ ವ್ಯವಸ್ಥೆ ಜಾರಿ‌ ಮಾಡಲಾಗಿದೆ. ಅಲ್ಲದೆ ಮೊದಲ ಬಾರಿಗೆ ಸಿ.ಎ ನಿವೇಶನಗಳ ಹಂಚಿಕೆಯಲ್ಲೂ ಪರಿಶಿಷ್ಟರಿಗೆ ಶೇ 24.10ರಷ್ಟು ಮೀಸಲಾತಿ‌ ಕಲ್ಪಿಸಲಾಗಿದೆ. ಲೆಹರ್ ಸಿಂಗ್ ಈ ಸತ್ಯವನ್ನು ಅರಿತು ಮಾತನಾಡುವುದು ಒಳ್ಳೆಯದು” ಎಂದು ತಿರುಗೇಟು ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments