ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ- 1ಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಿಸಲು ನಿರ್ಮಿಸಲಾಗಿದ್ದ ಮಂಟಪ ಕಾರ್ಯಕ್ರಮ ಆರಂಭವಾಗುವುದಕ್ಕೂ ಮೊದಲೇ ಕುಸಿದಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಬರಪೀಡಿತ 29 ತಾಲ್ಲೂಕುಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವದ ಯೋಜನೆಯ ಉದ್ಘಾಟನೆ ಇಂದು ನಡೆಯುತ್ತಿದೆ.
ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಮಧ್ಯಾಹ್ನ 12ಕ್ಕೆ ಚಾಲನೆ ನೀಡಿದ ಬಳಿಕ ಹೆಬ್ಬನಹಳ್ಳಿಯಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಅದಕ್ಕಾಗಿ ಹೂವು, ತಳಿರು ತೋರಣಗಳಿಂದ ಅಲಂಕೃತ ಮಂಟಪ ನಿರ್ಮಿಸಲಾಗಿತ್ತು. ಶುಕ್ರವಾರ 11.15ರ ಹೊತ್ತಿಗೆ ಮಂಟಪ ಕುಸಿದು ಬಿದ್ದಿದೆ.