ಹೆಸರಾಂತ ಹಿರಿಯ ಸಾಹಿತಿ ಹಂಪ ನಾಗರಾಜಯ್ಯ ಅವರನ್ನು ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು (ಸೆ.20) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಹಂಪನಾ ಅವರಿಗೆ ಶೀಘ್ರದಲ್ಲೇ ಅಧಿಕೃತ ಆಹ್ವಾನ ಕೊಡಲಾಗುವುದು. ಈಚೆಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ, ಉದ್ಘಾಟಕರ ಆಯ್ಕೆಯನ್ನು ನನ್ನ ವಿವೇಚನೆಗೆ ಬಿಟ್ಟಿದ್ದರು” ಎಂದು ಹೇಳಿದರು.
“ಈ ಬಾರಿಯ ದಸರಾ ಮಹೋತ್ಸವವು ಅ.3ರಿಂದ ನಡೆಯಲಿದೆ. 3ರಂದು ಬೆಳಿಗ್ಗೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ದೊರೆಯಲಿದೆ.