Homeಕರ್ನಾಟಕಬೆಂಗಳೂರು | ಯುವತಿ ಹತ್ಯೆ ಮಾಡಿ ಮೃತ ದೇಹ ಫ್ರಿಡ್ಜ್‌ನಲ್ಲಿ ಇಟ್ಟ ಘಟನೆ ಬೆಳಕಿಗೆ

ಬೆಂಗಳೂರು | ಯುವತಿ ಹತ್ಯೆ ಮಾಡಿ ಮೃತ ದೇಹ ಫ್ರಿಡ್ಜ್‌ನಲ್ಲಿ ಇಟ್ಟ ಘಟನೆ ಬೆಳಕಿಗೆ

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲೂ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಮಾದರಿ ಭಯಾನಕ ಹತ್ಯೆಯ ಘಟನೆ ನಡೆದಿದೆ.

ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿ ಆನಂತರ ಮೃತ ದೇಹವನ್ನು ತುಂಡರಿಸಿ ಫ್ರಿಡ್ಜ್ ನಲ್ಲಿ ಇರಿಸಲಾಗಿದೆ. ಈ ಘಟನೆ ಬೆಂಗಳೂರಿನ ಹೃದಯ ಭಾಗವಾದ ವೈಯಾಲಿಕಾವಲ್​ನ ಮುನ್ನೇಶ್ವರ ಬ್ಲಾಕ್​ನ ಮನೆಯೊಂದರ ಮೊದಲ ಮಹಡಿಯಲ್ಲಿ ನಡೆದಿದೆ.

ಘಟನೆಯ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್​ ಆಯುಕ್ತ ಸತೀಶ್, “ಮಹಿಳೆಯನ್ನು ಕೊಲೆ ಮಾಡಿ ಬಳಿಕ ಮೃತದೇಹ​ವನ್ನು ಫ್ರಿಡ್ಜ್​ನಲ್ಲಿ ಇಟ್ಟಿರುವ ಘಟನೆ ನಡೆದಿದೆ. ಇದು ಸಂಭವಿಸಿ ನಾಲ್ಕೈದು ದಿನಗಳು ಆಗಿರಬಹುದು. ಕೊಲೆಯಾಗಿರುವ ಯುವತಿಯ ಗುರುತು ಪತ್ತೆಯಾಗಿದೆ. ಹೊರ ರಾಜ್ಯದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ತನಿಖೆ ಬಳಿಕ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುವೆ” ಎಂದು ತಿಳಿಸಿದ್ದಾರೆ.

ಯುವತಿ ಕಳೆದ ಮೂರು ತಿಂಗಳ ಹಿಂದಷ್ಟೇ ಈ ಮನೆಗೆ ಬಂದಿದ್ದಳು. ಇಂದು ಬೆಳಗ್ಗೆ ಆಕೆಯ ತಾಯಿ-ಸಹೋದರಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ಹತ್ಯೆ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments