Homeಕರ್ನಾಟಕಮುಡಾ ಹಗರಣ | ಸೈಟ್‌ ವಾಪಸ್‌, ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ: ಆರ್‌ ಅಶೋಕ್

ಮುಡಾ ಹಗರಣ | ಸೈಟ್‌ ವಾಪಸ್‌, ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ: ಆರ್‌ ಅಶೋಕ್

ಮುಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಪಡೆದಿದ್ದ 14 ಸೈಟುಗಳನ್ನ ಹಿಂತಿರುಗಿಸುವ ನಿರ್ಧಾರ ಮಾಡಿದ್ದು, ನಾನು ತಪ್ಪೇ ಮಾಡಿಲ್ಲ ಎನ್ನುತ್ತಿದ್ದವರು ಈಗ ತಮ್ಮ ತಪ್ಪನ್ನು ಒಪ್ಪಿಕೊಂಡು ಸತ್ಯಕ್ಕೆ ಶರಣಾಗಿರುವುದು ನಮ್ಮ ಹೋರಾಟದ ಹಾದಿಯಲ್ಲಿ ಸಿಕ್ಕಿರುವ ಮತ್ತೊಂದು ಜಯ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದ್ದಾರೆ.

“ಕದ್ದ ಮಾಲನ್ನು ಹಿಂತಿರುಗಿಸಿದ ಕೂಡಲೇ ಕಳ್ಳ ನಿರಪರಾಧಿ ಆಗಿಬಿಡುತ್ತಾನೆಯೇ? ಕದ್ದ ಮಾಲನ್ನು ವಾಪಸ್ಸು ಕೊಟ್ಟ ತಕ್ಷಣ ಕಳ್ಳತನ ಮಾಫಿ ಆಗಿಬಿಡುತ್ತದೆಯೇ” ಎಂದು ಎಕ್ಸ್‌ ತಾಣದಲ್ಲಿ ಪ್ರಶ್ನಿಸಿದ್ದಾರೆ.

“ಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸಿದ್ದರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ ಎನ್ನುವುದು ಸಮಾಧಾನಕರ ವಿಷಯ. ಆದರೆ ‘ಅಡಿಕೆಗೆ ಹೋದ ಮಾನ, ಆನೆ ಕೊಟ್ಟರೂ ಬರುವುದಿಲ್ಲ’ ಸಿಎಂ ಸಿದ್ದರಾಮಯ್ಯನವರೇ. ತಾವು ತನಿಖೆ ಎದುರಿಸಲೇ ಬೇಕು. ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಲೇ ಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ” ಎಂದು ಎಚ್ಚರಿಸಿದ್ದಾರೆ.

“ಸಿಎಂ ಸಿದ್ದರಾಮಯ್ಯ ಅವರು ತಮ್ಮ ಪತ್ನಿ ಹೆಸರಿನಲ್ಲಿ ಅಕ್ರಮವಾಗಿ ಪಡೆದಿದ್ದ ಸೈಟುಗಳನ್ನು ವಾಪಸ್ಸು ನೀಡುವ ದೊಡ್ದ ಮನಸ್ಸು ಮಾಡಿರುವುದು ಸಂವಿಧಾನವನ್ನ ರಕ್ಷಿಸಲು ದಿಟ್ಟ ನಿರ್ಧಾರ ಕೈಗೊಂಡ ರಾಜ್ಯಪಾಲರಿಗೆ ಸಿಕ್ಕ ದೊಡ್ಡ ಜಯ, ರಾಜ್ಯಪಾಲರ ನಿರ್ಧಾರವನ್ನ ಎತ್ತಿ ಹಿಡಿದ ನ್ಯಾಯಾಂಗಕ್ಕೆ ಸಿಕ್ಕ ದೊಡ್ಡ ಜಯ; ಜಗ್ಗಲ್ಲ, ಬಗ್ಗಲ್ಲ ಎಂದು ಅಧಿಕಾರದ ಮದದಿಂದ ಮೆರೆಯುತ್ತಿದ್ದವರ ವಿರುದ್ಧ ಬಾಬಾಸಾಹೇಬ್ ಅಂಬೇಡ್ಕರ್‌ ಸಂವಿಧಾನಕ್ಕೆ ಸಿಕ್ಕ ದೊಡ್ಡ ಜಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments