Homeಕರ್ನಾಟಕಹುಬ್ಬಳ್ಳಿಯಲ್ಲಿ ಸರ್ಕಾರದ ವಿರುದ್ಧ ಶೀಘ್ರವೇ ಬೃಹತ್ ಪ್ರತಿಭಟನೆ: ಬಿ ವೈ ವಿಜಯೇಂದ್ರ

ಹುಬ್ಬಳ್ಳಿಯಲ್ಲಿ ಸರ್ಕಾರದ ವಿರುದ್ಧ ಶೀಘ್ರವೇ ಬೃಹತ್ ಪ್ರತಿಭಟನೆ: ಬಿ ವೈ ವಿಜಯೇಂದ್ರ

ಹುಬ್ಬಳ್ಳಿಯ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿರುವ ನಡೆಯನ್ನು ಖಂಡಿಸಿ ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಶೀಘ್ರವೇ ಹಮ್ಮಿಕೊಳ್ಳಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಇಂದು ವಿಧಾನಪರಿಷತ್ ಉಪ ಚುನಾವಣೆ ಸಂಬಂಧ ನಡೆದ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

“ಹುಬ್ಬಳ್ಳಿಯಲ್ಲಿ 2022ರಲ್ಲಿ ದೇಶದ್ರೋಹಿಗಳು ಪೊಲೀಸ್ ಠಾಣೆ ಮೇಲೆ ಕಲ್ಲೆಸೆದ, ದಾಳಿ ಮಾಡಿ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿತ್ತು. ಆ ಗಲಭೆ ಸೃಷ್ಟಿಸಿದ್ದ ದೇಶದ್ರೋಹಿಗಳ ಮೇಲಿನ ಕೇಸುಗಳನ್ನು ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಹಿಂದಕ್ಕೆ ಪಡೆದಿದೆ. ಇದು ಅತ್ಯಂತ ದುರದೃಷ್ಟಕರ ಮತ್ತು ಖಂಡನಾರ್ಹ” ಎಂದು ಆಕ್ಷೇಪಿಸಿದರು.

“ಗೃಹ ಸಚಿವರ ನೇತೃತ್ವದ ಉಪ ಸಮಿತಿ ಇದನ್ನು ಶಿಫಾರಸು ಮಾಡಿತ್ತು. ನಿಮ್ಮದೇ ಪೊಲೀಸರು ಈ ಕುರಿತು ಎಫ್‍ಐಆರ್ ಮಾಡಿತ್ತು. ಎನ್‍ಐಎ ತನಿಖೆಯೂ ನಡೆಯುತ್ತಿದೆ. ಆದರೆ, ರಾಜ್ಯ ಸರಕಾರದ ಈ ನಡವಳಿಕೆ ಅಕ್ಷಮ್ಯ ಅಪರಾಧ. ನಿನ್ನೆ ಇದರ ವಿರುದ್ಧ ಬೆಂಗಳೂರಿನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದ್ದೇವೆ” ಎಂದರು.

“ಭ್ರಷ್ಟಾಚಾರದಲ್ಲಿ ಮುಳುಗಿಹೋಗಿರುವ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿಗಳು ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ ಎಂದು ಟೀಕಿಸಿದ ಅವರು, ಕಾಂಗ್ರೆಸ್ ಸರಕಾರಕ್ಕೆ ಪಾಠ ಕಲಿಸಲು ಬಿಜೆಪಿ ನಿರಂತರ ಹೋರಾಟ ನಡೆಸುತ್ತ ಬಂದಿದೆ” ಎಂದು ತಿಳಿಸಿದರು.

“ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮೈಸೂರು ಮುಡಾ ಹಗರಣ, ಎಸ್‍ಇಪಿ, ಟಿಎಸ್‍ಪಿ ಹಣವನ್ನು ವರ್ಗಾವಣೆ ಮಾಡಿದ ವಿಚಾರಗಳನ್ನು ಇಟ್ಟುಕೊಂಡು ಮುಂದಿನ ಹೋರಾಟದ ರೂಪುರೇಷೆಗಳನ್ನು ನಾವು ಸದ್ಯವೇ ತೀರ್ಮಾನ ಮಾಡಲಿದ್ದೇವೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments