ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಇಂದು (ಅ.15) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು.
ಇದೇ ವೇಳೆ ಕರ್ನಾಟಕದ ಶಿಗ್ಗಾಂವಿ (ಹಾವೇರಿ), ಚನ್ನಪಟ್ಟಣ (ರಾಮನಗರ) ಮತ್ತು ಸಂಡೂರು (ಬಳ್ಳಾರಿ ಜಿಲ್ಲೆ) ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಪ್ರಕಟಿಸಿದ್ದು, ನವೆಂಬರ್ 13ರಂದು ಮೂರು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.
ಸಂಸದರಾಗಿ ಆಯ್ಕೆಯಾಗಿರುವ ಹೆಚ್ ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಚನ್ನಪಟ್ಟಣ ಕ್ಷೇತ್ರ ತೆರವಾಗಿದ್ದರೆ, ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾಂವಿ, ಇನ್ನು ಈ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ.
ಅಕ್ಟೋಬರ್ 18ರಿಂದ ಉಪಚುನಾವಣೆಗೆ ಅಧಿಸೂಚನೆ ಪ್ರಕಟ, ಅಕ್ಟೋಬರ್ 25ರಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆ ದಿನ, ಅಕ್ಟೋಬರ್ 28ರಂದು ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ, ಅಕ್ಟೋಬರ್ ಅ.30ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ