ವಿದ್ಯಾರ್ಥಿನಿಯರಿಗೆ ಬಿಯರ್ ಕುಡಿಸಿ, ಡ್ಯಾನ್ಸ್ ಮಾಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಕನಕಪುರದ ರೂರಲ್ ಪದವಿ ಪೂರ್ವ ಕಾಲೇಜಿನ ಮೂವರು ಉಪನ್ಯಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಆದೇಶಿಸಿದೆ.
ಕಳೆದ ಅ.9 ರಂದು ನಡೆದ ಘಟನೆಯ ಸಂಬಂಧ ಉಪನ್ಯಾಸಕರಾದ ವಿಶ್ವನಾಥ್, ಲಕ್ಷ್ಮೀಶ್, ನಾಗೇಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಕನಕಪುರ ಪಟ್ಟಣದ ರೂರಲ್ ಪದವಿ ಪೂರ್ವ ಕಾಲೇಜಿನಿಂದ ಅಕ್ಟೋಬರ್ 5 ರಿಂದ 10ರವರೆಗೆ ಮಡಿಕೇರಿ ಪ್ರವಾಸ ಆಯೋಜಿಸಲಾಗಿತ್ತು. ಪ್ರವಾಸದಲ್ಲಿ ಪ್ರಾಂಶುಪಾಲರು ಬಿಯರ್ ಕುಡಿದಿದ್ದಾರೆ. ಬಳಿಕ ಮೂವರು ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿ ಕೂಡಿಹಾಕಿ ಬಲವಂತವಾಗಿ ಬಿಯರ್ ಕುಡಿಸಿದ್ದಾರೆ. ಅಲ್ಲದೇ, ತಮ್ಮ ಜೊತೆ ಡ್ಯಾನ್ಸ್ ಮಾಡುವಂತೆ ಬಲವಂತ ಮಾಡಿದ್ದಾರೆ.
ಪ್ರವಾಸದಿಂದ ಕಾಲೇಜಿಗೆ ಬಂದ ಬಳಿಕ ವಿದ್ಯಾರ್ಥಿನಿಯರು ನಡೆದ ಘಟನೆ ಬಗ್ಗೆ ಮಹಿಳಾ ಉಪನ್ಯಾಸಕರಿಗೆ ಹೇಳಿದ್ದಾರೆ. ಅದಕ್ಕೆ ಮಹಿಳಾ ಉಪನ್ಯಾಸಕಿಯರು “ಕಾಲೇಜು ಅಂದ ಮೇಲೆ ಇದು ಕಾಮನ್” ಎಂದಿದ್ದಾರೆ. ಆದರೆ, ಈ ವಿಚಾರ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗಕ್ಕೆ ತಿಳಿದಿದೆ.
ವಿಚಾರ ತಿಳಿದ ಕೂಡಲೇ ಮಕ್ಕಳಾ ಹಕ್ಕುಗಳ ರಕ್ಷಣಾ ಆಯೋಗ, ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದು ಉಪನ್ಯಾಸಕರ ವಿರುದ್ಧ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದೆ. ಅಲ್ಲದೇ ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.