Homeಕರ್ನಾಟಕಸಿಎಂ ರಾಜೀನಾಮೆ ನೀಡಬೇಕು, ಸಚಿವ ಬೈರತಿ ಸುರೇಶ್ ಬಂಧನವಾಗಬೇಕು: ಶೋಭಾ ಕರಂದ್ಲಾಜೆ ಆಗ್ರಹ

ಸಿಎಂ ರಾಜೀನಾಮೆ ನೀಡಬೇಕು, ಸಚಿವ ಬೈರತಿ ಸುರೇಶ್ ಬಂಧನವಾಗಬೇಕು: ಶೋಭಾ ಕರಂದ್ಲಾಜೆ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾಪ್ತ, ಮುಡಾ ಅಧ್ಯಕ್ಷ ಮರಿಗೌಡರ ರಾಜೀನಾಮೆ ಪಡೆದುದು ಯಾಕೆ? ಅವರ ರಾಜೀನಾಮೆ ಪಡೆದು ಅವರ ಮೇಲೆ ಹಗರಣವನ್ನು ಹೊರಿಸಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಆರೋಪಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ಕೊಡಬೇಕು, ಬೈರತಿ ಸುರೇಶ್ ಅವರನ್ನು ತಕ್ಷಣ ಬಂಧಿಸಬೇಕು. ಬೈರತಿ ಸುರೇಶ್ ಬಂಧನವಾದರೆ ಮಾತ್ರ ಸತ್ಯ ಹೊರಕ್ಕೆ ಬರಲಿದೆ. ಅವರು ತಂದ ಕಡತಗಳ ವಿವರ ಪಡೆದುಕೊಳ್ಳಬೇಕು” ಎಂದು ಆಗ್ರಹಿಸಿದರು.

“ಮುಡಾ ಕಾರ್ಯದರ್ಶಿಯನ್ನು ಅಮಾನತು ಮಾಡಿದ್ದಾರೆ. ಬಳಿಕ ಅಮಾನತು ವಾಪಸ್ ಪಡೆದಿದ್ದಾರೆ. ಸಿದ್ದರಾಮಯ್ಯನವರು 2013ರಲ್ಲಿ ತಮ್ಮ ಕೇಸುಗಳಿಂದ ಹೊರಕ್ಕೆ ಬರಲು ಲೋಕಾಯುಕ್ತವನ್ನು ಮುಚ್ಚಿದ್ದರು. ಟರ್ಫ್ ಕ್ಲಬ್ ಕೇಸಿನಲ್ಲಿ ಸ್ಟೂವರ್ಡ್ ಮಾಡಲು ಚೆಕ್‍ನಲ್ಲಿ 1.30 ಕೋಟಿ ಪಡೆದವರು ಸಿದ್ದರಾಮಯ್ಯ. ಸಿದ್ದರಾಮಯ್ಯನವರು ಹೇಗೆ ಭ್ರಷ್ಟಾಚಾರರಹಿತರು” ಎಂದು ಪ್ರಶ್ನಿಸಿದರು.

“ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಮೈಸೂರಿಗೆ ಹೋಗಿ 1997ರ ನಂತರದ ಎಲ್ಲ ಕಡತಗಳನ್ನು ಕಾರಿನಲ್ಲಿ ತುಂಬಿಸಿ ತಂದಿದ್ದಾರೆ. ಅವು ಎಲ್ಲಿ ಹೋಗಿವೆ? ಅವನ್ನು ಸುಟ್ಟು ಹಾಕಲಾಗಿದೆ” ಎಂದು ದೂರಿದರು.

ನಿವೇಶನ ವಾಪಸ್ ಕೊಟ್ಟಿದ್ದೇ ಅಪರಾಧಕ್ಕೆ ಮೊದಲ ಸಾಕ್ಷಿ

“ಸಿಎಂ ಪತ್ನಿಗೆ ನಿವೇಶನ ಕೊಡುವ ಸಂಬಂಧ ಮುಡಾ ನಿರ್ಧಾರವಾದಾಗ ಸಿದ್ದರಾಮಯ್ಯರ ಮಗ ಯತೀಂದ್ರ ಶಾಸಕರಾಗಿದ್ದರು. ಮುಡಾ ಸದಸ್ಯರೂ ಆಗಿದ್ದರು. ಅವರ ಮೂಗಿನ ನೇರಕ್ಕೆ ನಿರ್ಧಾರವಾಗಿದ್ದು, ದಬಾವಣೆಯಿಂದ ನಿವೇಶನಗಳು ಸಿಕ್ಕಿವೆ” ಎಂದು ಆರೋಪಿಸಿದರು.

“ಭ್ರಷ್ಟಾಚಾರದಿಂದ ದುಡ್ಡು ಮಾಡುವುದೇ ದಂಧೆ ಎಂಬಂತಾಗಿದೆ. ಸಿದ್ದರಾಮಯ್ಯನವರು ಅತ್ಯಂತ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಆದರೆ, ಅವರು ಈ ಬಾರಿ ಹಣಕಾಸು ಸಚಿವರಾಗಿದ್ದು ಕೇವಲ ಭ್ರಷ್ಟಾಚಾರ ಮಾಡಲೆಂದು ಸಾಬೀತಾಗುತ್ತಿದೆ” ಎಂದು ಟೀಕಿಸಿದರು.

“ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವರು ಮಾಡಿದ ಭ್ರಷ್ಟಾಚಾರ, ರಾಷ್ಟ್ರೀಯ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹಣ ಹೋಗಿರುವುದೇ ಭ್ರಷ್ಟಾಚಾರ ಮಾಡುವುದಕ್ಕಾಗಿ ಎಂಬುದು ತನಿಖೆ ವೇಳೆ ಗೊತ್ತಾಗಿದೆ. ಈ ನಿಗಮಕ್ಕೆ ಹಣ ಕೊಟ್ಟು ಚುನಾವಣೆಗೆ ಬಳಸುವುದನ್ನು ಸರಕಾರ ಮಾಡಿದೆ” ಎಂದು ಆರೋಪಿಸಿದರು.

ವಿಧಾನಪರಿಷತ್ ಸದಸ್ಯ ಡಿ ಎಸ್ ಅರುಣ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್.ಹರೀಶ್ ಅವರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments