ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಇಲಾಖೆ ಮತ್ತು ಭಾರತ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾ ಆಯೋಜಿಸಿದ್ದ ‘ಬೆಂಗಳೂರು ಟೆಕ್ ಶೃಂಗಸಭೆ 2024ರ 27ನೇ ಆವೃತ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಟೆಕ್ ಅನ್ ಬೌಂಡ್ ಥೀಮ್ ನಡಿ ಆಯೋಜಿಸಿದ್ದ ಬಿಟಿಎಸ್ ಶೃಂಗಸಭೆಯ ಉದ್ಘಾಟನಾ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಶೃಂಗಸಭೆಯ ಮಹತ್ವ ಕುರಿತು ಮಾತನಾಡಿದರು.
ಜರ್ಮನಿಯ ಆರ್ಥಿಕ ವ್ಯವಹಾರ ಮತ್ತು ಫೆಡರಲ್ ಸಚಿವಾಲಯದ ಸ್ಟಾರ್ಟ್‌ಅಪ್‌ಗಳ ಆಯುಕ್ತ ಡಾ. ಅನ್ನಾ ಕ್ರಿಸ್ಟ್‌ಮನ್ ಮತ್ತು ಫ್ರಾನ್ಸ್‌ನ ಆರ್ಥಿಕ ಅಭಿವೃದ್ಧಿಯ ರಿಕವರಿ ವಿಭಾಗದ ಉಪಾಧ್ಯಕ್ಷೆ ಅಲೆಕ್ಸಾಂಡ್ರಾ ಡಬ್ಲಾಂಚೆ , ಡಾ.ಏಕ್ರೂಪ್ ಕೌರ್, ಐಎಎಸ್, ಸರ್ಕಾರದ ಕಾರ್ಯದರ್ಶಿ, ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ ಉಪಸ್ಥಿತರಿದ್ದರು.
ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಐಟಿ ಮತ್ತು ಬಿಟಿ ಇಲಾಖೆಯು ಸ್ಪೂರ್ತಿದಾಯಕ ಗಮನಾರ್ಹ ಸಾಧನೆಗಳಿಗಾಗಿ ಸ್ವಿಗ್ಗಿಯ ಸಿಇಒ ಮತ್ತು ಸಹ-ಸಂಸ್ಥಾಪಕ ಶ್ರೀಹರ್ಷ ಮೆಜೆಟಿಯವರನ್ನು ಸನ್ಮಾನಿಸಲಾಯಿತು. ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ತನ್ನ 40 ನೇ ವರ್ಷದ ಅಸ್ತಿತ್ವಕ್ಕೆ ಬೆಂಗಳೂರು ಮತ್ತು ಭಾರತದಲ್ಲಿ ಗಮನಾರ್ಹ ಪ್ರವೇಶಕ್ಕಾಗಿ ಗೌರವಿಸಲ್ಪಟ್ಟಿದೆ. ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಸಂತೋಷ್ ಕುಮಾರ್ ಅವರನ್ನು ಪುರಸ್ಕರಿಸಲಾಯಿತು.
BTS 2024 ರಲ್ಲಿ ಟೆಕ್ ಪ್ರದರ್ಶನವನ್ನು ಸಿಎಂ ಸಿದ್ದರಾಮಯ್ಯ ಅವರು ಗ್ರಾವಿಟಿ ಇಂಡಸ್ಟ್ರೀಸ್ ವಿನ್ಯಾಸಗೊಳಿಸಿದ ಫ್ಯೂಚರಿಸ್ಟಿಕ್ ಜೆಟ್ ಸೂಟ್‌ನಲ್ಲಿದ್ದ ಬಿಟಿಎಸ್ ಫ್ಲೈಯಿಂಗ್ ಮ್ಯಾನ್‌ನೊಂದಿಗೆ ಆಗಮಿಸಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.