Homeಕರ್ನಾಟಕನಬಾರ್ಡ್‌ ಅನ್ಯಾಯ ಪ್ರಶ್ನೆ, ಕೇಂದ್ರ ಸಚಿವರಿಂದ ಅಸಹಾಯಕತೆ ವ್ಯಕ್ತ: ಸಿದ್ದರಾಮಯ್ಯ

ನಬಾರ್ಡ್‌ ಅನ್ಯಾಯ ಪ್ರಶ್ನೆ, ಕೇಂದ್ರ ಸಚಿವರಿಂದ ಅಸಹಾಯಕತೆ ವ್ಯಕ್ತ: ಸಿದ್ದರಾಮಯ್ಯ

ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕ್‌ಗಳಲ್ಲಿ ಶೇ.10 ರಿಂದ 12 ಬಡ್ಡಿ ಹಾಕುತ್ತಾರೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ನವದೆಹಲಿಯಲ್ಲಿ ಗುರುವಾರ ರಾತ್ರಿ ಮಾಧ್ಯಮದವರೊಂದಿಗೆ ಮಾತನಾಡಿ, “ಈ ಬಗ್ಗೆ ಪ್ರಧಾನಮಂತ್ರಿ, ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದು, ಇದನ್ನು ಆರ್.ಬಿ.ಐ ಒಪ್ಪಿಲ್ಲ ಎಂದು ಸಚಿವರು ಉತ್ತರವನ್ನೂ ಬರೆದಿದ್ದಾರೆ. ನಬಾರ್ಡ್ ಕೇಂದ್ರ ಸರ್ಕಾರದ ಕೆಳೆಗೆ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಸಚಿವರೇ ಅಸಹಾಯಕತೆಯನು ವ್ಯಕ್ತಪಡಿಸಿದರೆ ಹೇಗೆ” ಎಂದು ಕೇಳಿದ್ದಾರೆ.

“ನಬಾರ್ಡ್ ನಲ್ಲಿ ಕಳೆದ ವರ್ಷ 5,600 ಕೋಟಿ ರೂ.ಗಳನ್ನು ಅಲ್ಪಾವಧಿ ಸಾಲಕ್ಕಾಗಿ ನೀಡಲಾಗಿತ್ತು. ಈ ವರ್ಷ 2,340 ಕೊಟಿ ರೂ.ಗಳನ್ನು ನೀಡಿದ್ದಾರೆ. 3,220 ಕೋಟಿ ರೂ.ಗಳನ್ನು ಕಡಿತಗೊಳಿಸಲಾಗಿದೆ. 58% ರಷ್ಟು ಕಡಿಮೆ ಮಾಡಿರುವುದು ರೈತರಿಗೆ ಮಾಡಿರುವ ದ್ರೋಹ. ನಬಾರ್ಡ್ ಶೇ.4.50 ಬಡ್ಡಿ ದರದಲ್ಲಿ ಸಾಲ ಕೊಡುತ್ತಾರೆ. 5 ವರ್ಷಗಳ ಅಂಕಿ ಅಂಶಗಳನ್ನು ತೆಗೆದು ನೋಡಿದರೆ 5,000 ಕೋಟಿ ರೂ.ಗಳಿದೆ. ಸಾಲ ಕೊಡುವುದು ಯಾವಾಗಲೂ ಹೆಚ್ಚಾಗುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ” ಎಂದರು.

“ಎಲ್ಲ ರಾಜ್ಯಗಳಿಗೂ ಕಡಿತ ಮಾಡಲಾಗಿದೆ. ಈ ಕುರಿತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವರಿಸಲಾಗಿದೆ. ಆರು ವರ್ಷಗಳಿಂದ ಜಾಸ್ತಿ ಕೊಟ್ಟಿದ್ದು, ಈಗ ಕಡಿಮೆ ಮಾಡಿದರೆ ಹೇಗೆ? ನಮ್ಮ ಸರ್ಕಾರದ ವತಿಯಿಂದ 5 ಲಕ್ಷದವರೆಗೆ ಬಡ್ಡಿರಹಿತವಾಗಿ ಸಾಲ ನೀಡಲಾಗುತ್ತಿದೆ. ಶೇ.4.50 ಬಡ್ಡಿ ಕೊಡುವುದು ನಮ್ಮ ಸರ್ಕಾರ ದೀರ್ಘಾವಧಿ ಮತ್ತು ಮಧ್ಯಮಾವಧಿ ಸಾಲವನ್ನು 5-15 ಲಕ್ಷದವರೆಗೆ ಶೇ.3 ಬಡ್ಡಿದರದಲ್ಲಿ ನೀಡಲಾಗುತ್ತಿದೆ. 1,200 ಕೋಟಿಗಳಿಗಿಂತಲೂ ಹೆಚ್ಚು ಬಡ್ಡಿಯನ್ನು ನೀಡುತ್ತೇವೆ. ಈ ಬಗ್ಗೆ ಆರ್.ಅಶೋಕ್, ಬಿ.ಎಸ್.ಯಡಿಯೂರಪ್ಪ, ಯತ್ನಾಳ್, ಸಿ.ಟಿ.ರವಿ, ಹೆಚ್.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ ಮಾತನಾಡುವುದಿಲ್ಲ” ಎಂದು ಹರಿಹಾಯ್ದರು.

‌ಬಡವರ ಕುರಿತು ಯಾವ ಕಾಳಜಿಯೂ ಇಲ್ಲ

“ಬಿಜೆಪಿಗೆ ಬಡವರ ಕುರಿತು ಯಾವ ಕಾಳಜಿಯೂ ಇಲ್ಲ. ಸರ್ಕಾರಿ ನೌಕರರು, ತೆರಿಗೆದಾರರನ್ನು ಬಿಟ್ಟು ಬೇರೆಯಾರನ್ನೂ ಬಿಪಿಎಲ್ ಕಾರ್ಡಿನಿಂದ ತೆಗೆಯಬೇಡಿ ಎಂದು ಸೂಚಿಸಲಾಗಿದೆ. ಬಿಜೆಪಿಯವರು ರಾಜಕೀಯಕ್ಕಾಗಿ ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಯಾರು? ಅವರಾ? ಅದನ್ನು ಜಾರಿಗೆ ತಂದಿದ್ದು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರು” ಎಂದರು.

“ನಾವು ಸರ್ಕಾರಿ ನೌಕರರು, ತೆರಿಗೆದಾರರಿಗೆ ಬಿಪಿಎಲ್ ಕಾರ್ಡು ಕೊಡಬಾರದು ಎಂದು ಹೇಳಿದ್ದೇವೆ. ಈ ಯೋಜನೆ ಮಾಡಿರುವುದು ಬಡವರಿಗಾಗಿ. ಸರ್ಕಾರಿ ನೌಕರರು ಬಿಪಿಎಲ್ ಗೆ ಅರ್ಹರೇ? ನಾವು 5 ಗ್ಯಾರಂಟಿಗಳನ್ನು ಜಾರಿ ಮಾಡಿದ್ದೇವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮಾಡಿದ್ದಾರಾ? ಎಸ್.ಸಿ.ಎಸ್.ಪಿ/ಟಿಎಸ್.ಪಿ ಕಾಯ್ದೆಯನ್ನು ಎಲ್ಲಿಯಾದರೂ ಜಾರಿಗೆ ತಂದಿದ್ದಾರೆಯೇ? ಬಿಜೆಪಿಗೆ ಬಡವರ ಕುರಿತು ಯಾವ ಕಾಳಜಿಯೂ ಇಲ್ಲ” ಎಂದರು.

ಬಿಜೆಪಿ ಬಳಿ ಸಾಲ ಕೇಳಿಲ್ಲ

ಗ್ಯಾರಂಟಿಗಳಿಗೆ ದುಡ್ಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ, “ನಾವು ಹಣವಿಲ್ಲ ಎಂದು ಬಿಜೆಪಿ ಬಳಿ ಸಾಲ ಕೇಳಿಲ್ಲ. ಯಾವುದಕ್ಕೆ ಹಣವಿಲ್ಲ ಎಂದು ತಿಳಿಸಿ ಎಂದು ಪ್ರಶ್ನಿಸಿದರು. ರಾಜಕೀಯವಾಗಿ ಮಾತನಾಡುತ್ತಾರೆ ಅಷ್ಟೇ ಎಂದರು. ಚುನಾವಣೆ ಸಂದರ್ಭದಲ್ಲಿ ಎಲ್ಲರಿಗೂ ಉಚಿತವಾಗಿ ಓಡಾಟ ಮಾಡಬಹುದು ಎಂದು ಹೇಳಿದ್ದರು ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾವು ಯಾರಿಗೂ ತಾರತಮ್ಯ ಮಾಡಿಲ್ಲ. ಅಶೋಕ್ ಅವರ ಪತ್ನಿಯೂ ಓಡಾಡಬಹುದು” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments