Homeಕರ್ನಾಟಕಸಚಿವ ಸಂಪುಟ‌ ಸಭೆ | ಅಲ್ಪಸಂಖ್ಯಾತ ಶಿಕ್ಷಣ ಕಾಯ್ದೆ ತಿದ್ದುಪಡಿ: ಹೆಚ್‌ ಕೆ ಪಾಟೀಲ್

ಸಚಿವ ಸಂಪುಟ‌ ಸಭೆ | ಅಲ್ಪಸಂಖ್ಯಾತ ಶಿಕ್ಷಣ ಕಾಯ್ದೆ ತಿದ್ದುಪಡಿ: ಹೆಚ್‌ ಕೆ ಪಾಟೀಲ್

ಅಲ್ಪಸಂಖ್ಯಾತ ಶಿಕ್ಷಣ ಕಾಯ್ದೆ ತಿದ್ದುಪಡಿಗೆ ಸಂಪುಟ ಅಸ್ತು ಎಂದಿದೆ. ಮುಸ್ಲಿಂ ಅಷ್ಟೇ ಅಲ್ಲ, ಕ್ರಿಶ್ಚಿಯನ್ ಇನ್ಸ್​ಸ್ಟಿಟ್ಯೂಷನ್​​ಗೆ ಷರತ್ತುಗಳು ಅನ್ವಯವಾಗಲಿದೆ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ.

ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ಮಾಡಿ ಅನುಮೋದಿಸಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್, “ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಪಡೆಯಲು ಎಲ್ಲರಿಗೂ ಮಕ್ತ ಅವಕಾಶವಿರಲಿದೆ. ಅಲ್ಪಸಂಖ್ಯಾತ ಶಿಕ್ಷಣ ಕಾಯ್ದೆಯಲ್ಲಿ ಮೊದಲು ನಿರ್ಬಂಧಗಳಿದ್ದವು” ಎಂದರು.

“ಔಷಧ ನಿಯಂತ್ರಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆಗಳನ್ನು ವಿಲೀನಗೊಳಿಸಲು ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಪರಿಣಾಮಕಾರಿಯಾಗಿ ಕೆಲಸ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ” ಎಂದು ಹೇಳಿದರು.

“ಸಮಾಜಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರವನ್ನು 43.95 ಕೋಟಿ ರೂ. ವೆಚ್ಚದಲ್ಲಿ ಒದಗಿಸಲು ತೀರ್ಮಾನಿಸಲಾಗಿದೆ. ಆಹಾರ ಗುಣಮಟ್ಟ ಮತ್ತು ಔಷಧ ನಿಯಂತ್ರಣ ಇಲಾಖೆಯನ್ನು ಒಂದು ಮಾಡಲು ಒಪ್ಪಿಗೆ ನೀಡಲಾಗಿದೆ. ಆ ಮೂಲಕ ಮತ್ತಷ್ಟು ಗುಣಮಟ್ಟ ಕಾಯ್ದುಕೊಳ್ಳಲು ಈ ತೀರ್ಮಾನ ಕೈಗೊಳ್ಳಲಾಗಿದೆ. ಯುಪಿ, ಬಿಹಾರ ಬೇರೆಡೆ ಇದೇ ರೀತಿ ಮರ್ಜ್ ಮಾಡಲಾಗಿದೆ. ಇದೀಗ ಮರ್ಜ್ ಮಾಡೋದ್ರಿಂದ ಒಳ್ಳೆಯ ರಿಸಲ್ಟ್ ಸಿಗಲಿದೆ” ಎಂದು ತಿಳಿಸಿದರು.

“ವಿಶ್ವಬ್ಯಾಂಕ್ ನೆರವಿನಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳ ಉನ್ನತೀಕರಣಕ್ಕೆ 1500 ಕೋಟಿ ರೂ. ಕಾರ್ಯಕ್ರಮ ಯೋಜನೆ ರೂಪಿಸಲಾಗಿದೆ. ವಿಶ್ವಬ್ಯಾಂಕ್​ನಿಂದ 1,750 ಕೋಟಿ ರೂ. ಹಣ ಸಾಲ ಪಡೆಯುವುದು. ಒಟ್ಟು ಉನ್ನತ ಶಿಕ್ಷಣ ಸಂಸ್ಥೆಗಳ ಬಲವರ್ಧನೆಗೆ 2,500 ಕೋಟಿ ರೂ. ಅನುದಾನಕ್ಕೆ ಅಸ್ತು ಎನ್ನಲಾಗಿದೆ. 19.70 ಕೋಟಿ ರೂ. ವೆಚ್ಚದಲ್ಲಿ ಲ್ಯಾಬ್​​ಗಳು ಡಯಾಗ್ನಸ್ಟಿಕ್ ಕಿಟ್ ಖರೀದಿಸಲು ಅನುಮೋದನೆ ನೀಡಲಾಗಿದೆ” ಎಂದರು.

“ರಸ್ತೆ ಗುಂಡಿಗಳಿಂದ ಸರ್ಕಾರ ಟೀಕೆಗೊಳಗಾಗಿತ್ತು. ಹಾಗಾಗಿ ರಸ್ತೆ ಡಾಂಬರೀಕರಣಕ್ಕೆ ಅನುದಾನ ಬಿಡುಗಡೆ ಮಾಡಿದೆ. 694 ಕೋಟಿ ರೂ. ಅನುದಾನದಲ್ಲಿ 1681 ಕಿ.ಮೀ ಬಿಬಿಎಂಪಿ ವ್ಯಾಪ್ತಿಯ ಉಪಮುಖ್ಯ ರಸ್ತೆಗಳ‌ ಅಭಿವೃದ್ಧಿ ಮಾಡುವುದು. ಸಂಪಂಗಿರಾಮ ನಗರದಲ್ಲಿ ಸಮಾಜ‌ಕಲ್ಯಾಣ ಭವನ ನಿರ್ಮಾಣಕ್ಕೆ 40.50 ಕೋಟಿ ರೂ. ಅನುದಾನಕ್ಕೆ ಸಮ್ಮತಿಸಲಾಗಿದೆ” ಎಂದು ಹೇಳಿದರು.

“ಕಾರ್ಪೊರೇಷನ್ ಸಂಸ್ಥೆಗಳಿಗೆ ಅಂತರ್ ಉದ್ಯಮ ಠೇವಣಿ ಇಡುವುದಕ್ಕೆ ಸಂಪುಟ ಸಮ್ಮತಿ ಸೂಚಿಸಿದೆ. ಒಂದರಿಂದ ಮತ್ತೊಂದು ಉದ್ಯಮದಲ್ಲಿ ಹಣ ಠೇವಣಿ ಇಡುವುದು. ಸೇವೆ ಎಲ್ಲಿದೆ ಅಲ್ಲಿಂದ ಬೇರೆಯದಕ್ಕೆ ಠೇವಣಿ ಇಡಬಹುದಾಗಿದೆ. ಆ ಮೂಲಕ ಠೇವಣಿದಾರರ ಹಿತಾಸಕ್ತಿ ಕಾಯ್ದೆಗೆ ತಿದ್ದುಪಡಿಗೆ ಸಂಪುಟ ಅಸ್ತು ಎಂದಿದೆ” ಎಂದು ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments