Homeಕರ್ನಾಟಕಚಳಿಗಾಲ ಅಧಿವೇಶನದಲ್ಲಿ 5 ವಿಧೇಯಕಗಳ ಮೇಲೆ ಸುಧೀರ್ಘ ಚರ್ಚೆ: ಯು ಟಿ ಖಾದರ್

ಚಳಿಗಾಲ ಅಧಿವೇಶನದಲ್ಲಿ 5 ವಿಧೇಯಕಗಳ ಮೇಲೆ ಸುಧೀರ್ಘ ಚರ್ಚೆ: ಯು ಟಿ ಖಾದರ್

ಬೆಳಗಾವಿಯಲ್ಲಿ ಸೋಮವಾರ(ಡಿ.9)ದಿಂದ ಡಿ.20ರವರೆಗೆ ನಡೆಯಲಿರುವ ವಿಧಾನಮಂಡಲ ಅಧಿವೇಶನವು ಈ ಬಾರಿಯೂ ಕೂಡ ಮಾದರಿಯಾಗುವ ರೀತಿಯಲ್ಲಿ ನಡೆಯಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.

ಸುವರ್ಣಸೌಧದ ಕೊಠಡಿ ಸಂಖ್ಯೆ 238ರಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಡಿ.9ರಂದು ಬೆಳಗ್ಗೆ 11 ರಿಂದ ಮೊದಲ ದಿನದ ಅಧಿವೇಶನವು ವಿದ್ಯುಕ್ತವಾಗಿ ಆರಂಭವಾಗಲಿದೆ. ಇದಕ್ಕೂ ಮುಂಚಿತವಾಗಿ 10.30ಕ್ಕೆ ಐತಿಹಾಸಿಕ ಅನುಭವ ಮಂಟಪ ಸ್ಮರಣೆಯ ಬೃಹತ್ ತೈಲ ವರ್ಣದ ಚಿತ್ರದ ಅನಾವರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ. ವಿಧಾನಸಭೆಯ ಸಭಾಧ್ಯಕ್ಷರು, ವಿಧಾನ ಪರಿಷತ್ತಿನ ಸಭಾಪತಿಗಳು, ಉಪ ಸಭಾಪತಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಹಲವಾರು ಗಣ್ಯರು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ” ಎಂದರು.

“ಮೊದಲ ದಿನ ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ವಿಧಾನಸಭೆ ಸದಸ್ಯರಿಗೆ ಪ್ರಮಾಣ ವಚನ ಬೋಧನೆ ನಡೆಯಲಿದೆ. ಮಧ್ಯಾಹ್ನ ಬಿಎಸ್‌ಸಿ (ಕಲಾಪ ಸಲಹಾ ಸಮಿತಿ) ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಮುಂದಿನ ಅಧಿವೇಶನದ ರೂಪುರೇಷಗಳ ಬಗ್ಗೆ ಸಮಗ್ರ ಚರ್ಚಿಸಿ ಅಂತಿಮಗೊಳಿಸಲಾಗುವುದು” ಎಂದು ಹೇಳಿದರು.

ಅಧಿವೇಶನದಲ್ಲಿ 5 ವಿಧೇಯಕಗಳ ಮೇಲೆ ಸುಧೀರ್ಘ ಚರ್ಚೆ

ಈ ಬಾರಿ ಅಧಿವೇಶನದಲ್ಲಿ 5 ವಿಧೇಯಕಗಳ ಮೇಲೆ ಸುಧೀರ್ಘ ಚರ್ಚೆ ನಡೆಯಲಿದೆ. ಎರಡು ಆಧ್ಯಾದೇಶದ‌ ಬದಲಿ ವಿಧೇಯಕಗಳನ್ನು ಪರ್ಯಾಲೋಚನೆಗೆ ತೆಗೆದುಕೊಳ್ಳಲಾಗುವುದು. ಅಧಿವೇಶನದಲ್ಲಿ 10 ದಿನಗಳ ಕಾಲ ಪ್ರಶ್ನೋತ್ತರ ಅವಧಿ ನಿಗದಿಪಡಿಸಲಾಗಿದೆ. ಗಮನ ಸೆಳೆಯುವ ಸೂಚನೆಗಳು, ಶೂನ್ಯ ವೇಳೆ, ನಿಲುವಳಿ ಸೂಚನೆ ನಡೆಸಲಾಗುವುದು. ಈವರೆಗೆ 3,004 ಪ್ರಶ್ನೆಗಳು, 205 ಗಮನ ಸೆಳೆಯುವ ಸೂಚನೆಗಳು, 96 ನಿಯಮ 351ರ ಸೂಚನೆಗಳನ್ನು ಸ್ವೀಕರಿಸಲಾಗಿದೆ. ಜತೆಗೆ 3 ಖಾಸಗಿ ವಿಧೇಯಕಗಳನ್ನು ಸಹ ಸ್ವೀಕರಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಬೆಂಗಳೂರಿನ ವಿಧಾನಸೌಧದ ವಿಧಾನಸಭೆಯ ಮೊಗಸಾಲೆಯಲ್ಲಿ ಇರುವ ಮಾದರಿಯಲ್ಲಿಯೇ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈ ಬಾರಿ ಹೊಸದಾಗಿ ಸಭಾಧ್ಯಕ್ಷರ ಪೀಠವನ್ನು ಸಿದ್ಧಪಡಿಸಲಾಗಿದೆ. ಅಧಿವೇಶನದ ಕಾರ್ಯವ್ಯವಸ್ಥೆಗಾಗಿ 2,500 ಅಧಿಕಾರಿಗಳು, ಸಿಬ್ಬಂದಿ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್‌ಗಾಗಿ ಒಟ್ಟು 8,500 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ 10 ಸಮಿತಿ ರಚಿಸಿ ವಸತಿ, ಸಾರಿಗೆ ಸೇರಿದಂತೆ ವಿವಿಧ ವ್ಯವಸ್ಥೆ ಮಾಡಲಾಗಿದೆ” ಎಂದರು.

ಛಾಯಾಚಿತ್ರಗಳ ಪ್ರದರ್ಶನಕ್ಕೆ ವ್ಯವಸ್ಥೆ

“ಕಲಾಪ ವೀಕ್ಷಣೆಗೆ ಆಗಮಿಸುವ ವಿದ್ಯಾರ್ಥಿ, ಶಿಕ್ಷಕರಿಗೆ ಮಾಹಿತಿಗಾಗಿ ಬೆಳಗಾವಿಯಲ್ಲಿ 1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ದಶಮಾನೋತ್ಸವ ನೆನಪಿನ ಛಾಯಾಚಿತ್ರಗಳ ಪ್ರದರ್ಶನಕ್ಕೆ ಏರ್ಪಾಡು ಮಾಡಲಾಗಿದೆ. ಇದಕ್ಕಾಗಿ ಮಹಾತ್ಮ ಗಾಂಧೀಜಿ ಅವರ ಅಪರೂಪದ ಭಾವಚಿತ್ರಗಳನ್ನು ಸಂಗ್ರಹಿಸಿ ಸುವರ್ಣಸೌಧದ ಆಯಾ ಕಡೆಗಳಲ್ಲಿ ಹಾಕಲಾಗಿದೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments