Homeಕರ್ನಾಟಕಆರೋಗ್ಯ ವ್ಯವಸ್ಥೆ ನಿರ್ವಹಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲ: ‌ಆರ್‌ ಅಶೋಕ್‌ ವಾಗ್ದಾಳಿ

ಆರೋಗ್ಯ ವ್ಯವಸ್ಥೆ ನಿರ್ವಹಣೆಯಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲ: ‌ಆರ್‌ ಅಶೋಕ್‌ ವಾಗ್ದಾಳಿ

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ನಿರ್ವಹಣೆ ಮಾಡುವಲ್ಲಿ ಕೊಲೆಗಡುಕ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಅವರು, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಬರೆದುಕೊಂಡಿರುವ ಅವರು, “ಬಳ್ಳಾರಿಯಲ್ಲಿ ಸಂಭವಿಸುತ್ತಿರುವ ಬಾಣಂತಿ ಮಹಿಳೆಯರ ಸರಣಿ ಸಾವಿನ ಬೆನ್ನಲ್ಲೇ ಈಗ ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಒಂದು ವರ್ಷದಿಂದ 322 ನವಜಾತ ಶಿಶುಗಳು, 29 ಬಾಣಂತಿ ಮಹಿಳೆಯರು ಮೃತಪಟ್ಟಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ” ಎಂದಿದ್ದಾರೆ.

35,196 ಹುದ್ದೆಗಳು ಖಾಲಿ ಇವೆ

“ಅಧಿಕಾರಕ್ಕೆ ಬಂದರೆ ಎನ್ಎಚ್ಎಂ ಅಡಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಹಾಗು ನೌಕರರನ್ನ ಖಾಯಂ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ, ಈಗ ಅವರಿಗೆ ವಿಶ್ವಾಸ ದ್ರೋಹ ಬಗೆದಿದೆ. ಒಂದು ಕಡೆ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇವೆ. ಮತ್ತೊಂದು ಕಡೆ ಖಾಯಂ ಹುದ್ದೆ ಬೇಡಿಕೆಗಾಗಿ 30,000 ಗುತ್ತಿಗೆ ವೈದ್ಯರು, ನೌಕರರು ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ. ಕೊರೊನಾ ವೈರಸ್ ನಿಂದ ಬಚಾವಾದ ಕರ್ನಾಟಕದ ಜನತೆ, ಈಗ ಕಾಂಗ್ರೆಸ್ ವೈರಸ್ ನಿಂದ ಮುಕ್ತವಾಗಬೇಕಿದೆ” ಎಂದು ಕುಟುಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments