HomeSportಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್‌ ಆರಂಭ; ವಿರಾಟ್‌ ಕೊಹ್ಲಿ ವಿಶೇಷ ದಾಖಲೆ

ಭಾರತ ಮತ್ತು ಆಸ್ಟ್ರೇಲಿಯಾ ಟೆಸ್ಟ್‌ ಆರಂಭ; ವಿರಾಟ್‌ ಕೊಹ್ಲಿ ವಿಶೇಷ ದಾಖಲೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನ ಗಾಬಾ ಮೈದಾನದಲ್ಲಿ ಶುರುವಾಗಿದ್ದು, ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಆಸ್ಟ್ರೇಲಿಯಾ ತಂಡ ಇನಿಂಗ್ಸ್ ಆರಂಭಿಸಿದೆ. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ತಮ್ಮದಾಗಿಸಿಕೊಂಡಿದ್ದಾರೆ. ಅದರಂತೆ ಫೀಲ್ಡಿಂಗ್​ಗಾಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 100 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಕೊಹ್ಲಿ ಎನಿಸಿಕೊಂಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನೂರು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಮಾಸ್ಟರ್ ಬ್ಲಾಸ್ಟರ್ ಆಸೀಸ್ ವಿರುದ್ಧ 110 ಪಂದ್ಯಗಳನ್ನಾಡಿ ಈ ದಾಖಲೆ ನಿರ್ಮಿಸಿದ್ದಾರೆ. ಇದೀಗ ಆಸ್ಟ್ರೇಲಿಯಾ ವಿರುದ್ಧ 100ನೇ ಪಂದ್ಯದಲ್ಲಿ ಕಣಕ್ಕಿಳಿದು, ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ 110 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸಚಿನ್ ತೆಂಡೂಲ್ಕರ್ 6,707 ರನ್ ಕಲೆಹಾಕಿದ್ದರು. 100ನೇ ಪಂದ್ಯ ಆಡುತ್ತಿರುವ ವಿರಾಟ್ ಕೊಹ್ಲಿ 5,326 ರನ್ ಗಳಿಸಿದ್ದಾರೆ.

ಪಂದ್ಯಕ್ಕೆ ಮಳೆ ಅಡ್ಡಿ

ಬಾರ್ಡರ್-ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಭೋಜನ ವಿರಾಮದ ವೇಳೆಗೆ ಯಾವುದೇ ವಿಕೆಟ್ ನಷ್ಟವಿಲ್ಲದೇ 28 ರನ್‌ಗಳಿಸಿದೆ. ಆಟದ ಮಧ್ಯೆ ಮಳೆ ಬಂದಿದ್ದರಿಂದ ಪಂದ್ಯಕ್ಕೆ ಅಡ್ಡಿಯಾಗಿದೆ. ಆಸ್ಟ್ರೇಲಿಯಾ 13. 2 ಓವರ್‌ಗಳಲ್ಲಿ 28 ರನ್‌ಗಳಿಸಿದೆ. ಖವಾಜ 19. ನಥನ್ 4 ರನ್‌ಗಳಿಸಿ ಕ್ರೀಸ್‌ನಲ್ಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments