Homeಕರ್ನಾಟಕಸಿ ಟಿ ರವಿ ಮಾತಿನಿಂದ ನಾನು ಶಾಕ್‌ನಲ್ಲಿದ್ದೇನೆ, ನೆನೆದರೆ ಕಣ್ಣೀರು ಬರುತ್ತದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಸಿ ಟಿ ರವಿ ಮಾತಿನಿಂದ ನಾನು ಶಾಕ್‌ನಲ್ಲಿದ್ದೇನೆ, ನೆನೆದರೆ ಕಣ್ಣೀರು ಬರುತ್ತದೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ರಾಜಕಾರಣದಲ್ಲಿ ದ್ವೇಷ ಭಾಷಣಗಳು ಸಾಮಾನ್ಯ. ಆದರೆ, ಇದುವರೆಗೂ ಇಂಥ ನೀಚ ರಾಜಕಾರಣ ನೋಡಿಲ್ಲ. ವಿಧಾನ ಪರಿಷತ್ ಅಂದರೆ ಬುದ್ದಿವಂತರ ಛಾವಡಿ ಅಂತಾರೆ‌. ಆದರೆ ಅಲ್ಲಿ ಆಗಿದ್ದೇನು? ಈ ಘಟನೆಯಿಂದ ನಾನು ತುಂಬಾ ಶಾಕ್ ನಲ್ಲಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, ಸಿ ಟಿ ರವಿ ಅವಾಚ್ಯ ಶಬ್ದ ಬಳಕೆ, ನಿಂದನೆಯಿಂದ ಉಂಟಾದ ಜಗಳ ಹಾಗೂ ವಿವಾದಕ್ಕೆ ಸಂಬಂಧಪಟ್ಟಂತೆ ಸ್ಪಷ್ಟನೆ ನೀಡಿದರು.

“ಸುದ್ದಿ ತಿಳಿದ ತಕ್ಷಣ ನನ್ನ ಕುಟುಂಬದ ಸದಸ್ಯರು, ಕ್ಷೇತ್ರದ ಜನರು ಫೋನ್ ಮಾಡಿ ಧೈರ್ಯ ತುಂಬಿದರು. 10 ಬಾರಿ ಅತ್ಯಂತ ಕೆಟ್ಟ ಪದ ಬಳಸಿ ನನ್ನ ತೇಜೋವಧೆ ಮಾಡಿದರು. ನಾನು ಯಾವುದಕ್ಕೂ ಹೆದರುವುದಿಲ್ಲ. ನನ್ನನ್ನು ನೋಡಿ‌ ಎಷ್ಟೋ ಮಹಿಳೆಯರು ರಾಜಕಾರಣಕ್ಕೆ ಬರಲು ಸ್ಫೂರ್ತಿ ಪಡೆದಿದ್ದಾರೆ. ಆದರೆ ಇಂಥ ಪದಗಳನ್ನು ಸಹಿಸಲು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

“ಅಂಬೇಡ್ಕರ್ ಅವರಿಗೆ ಅವಮಾನವಾಗುವ ರೀತಿ ಗೃಹ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾತನಾಡಿದ್ದರು. ಅದನ್ನ ನಾವು ನಿನ್ನೆ ಖಂಡಿಸಿ ಪ್ರತಿಭಟನೆ ನಡೆಸಿದೆವು. ಏಕೆಂದರೆ ಅಂಬೇಡ್ಕರ್ ಅವರಿಂದಲೇ ನಾವು ಎಂಎಲ್‌ಎ, ಮಂತ್ರಿ ಆಗಲಿಕ್ಕೆ ಸಾಧ್ಯವಾಗಿದೆ. ಧರಣಿ ಮುಗಿಸಿ ಸೀಟ್ ಮೇಲೆ ಕುಳಿತಿದ್ದೆವು. ಆಗ ಸಿಟಿ ರವಿ ಅವರು ಇದ್ದಕ್ಕಿದ್ದಂತೆ ಬಂದು ರಾಹುಲ್ ಗಾಂಧಿಗೆ ಡ್ರಗ್ ಎಡಿಕ್ಟ್ ಎಂದರು, ಆಗ ನನಗೆ ಕೋಪ ಬಂದು, ತಾವು ಕೂಡ ಆಕ್ಸಿಡೆಂಟ್ ಮಾಡಿದ್ದೀರಿ ನೀವು ಕೊಲೆಗಾರರಾಗ್ತಿರಿ ಅಂದೆ. ಆಗ ಅವರು ನನಗೆ ಹೇಳಬಾರದ ಪದವನ್ನು ಒಂದು ಬಾರಿ ಅಲ್ಲ ಎರಡು ಬಾರಿ ಅಲ್ಲ ಪದೇ ಪದೇ ಹಲವು ಸಲ ಹೇಳಿದರು” ಎಂದು ಕಣ್ಣೀರು ಹಾಕಿದರು.

“ನನಗೆ ಆ ತರಾ ಹೇಳಿದ್ದಕ್ಕೆ ಅಪಮಾನವಾಗಿದೆ. ಇಲ್ಲಿಯವರೆಗೂ ನಾನು ಒಂದು ಇರುವೆಗೂ ಕಾಟ ಕೊಟ್ಟವಳಲ್ಲ, ಕೆಟ್ಟವರನ್ನ ಕಂಡ್ರೆ ದೂರ ಇರೋಳು. ಆ ವೇದಿಕೆಯಲ್ಲಿ ಎಲ್ಲರೂ ಧೃತರಾಷ್ಟ್ರರಾದರು. ನಮ್ಮ ಪಕ್ಷದವರು ಮಾತ್ರ ನನ್ನ ಬೆನ್ನಿಗೆ ನಿಂತರು” ಎಂದು ಹೇಳಿದರು.

“ನಾನು ಕೊಲೆಗಡುಕ ಎಂದಿದ್ದು ನಿಜ: ರಾಹುಲ್ ಗಾಂಧಿಯವರನ್ನು ಸುಖಾಸುಮ್ಮನೆ ಎಳೆದು ತಂದು ಡ್ರಗ್ ಅಡಿಕ್ಟ್ ಎಂದಿದ್ದಕ್ಕೆ ನೀವು ಮೂವರನ್ನು ಆಕ್ಸಿಡೆಂಟ್ ಮಾಡಿ ಅವರ ಕೊಲೆಗೆ ಕಾರಣರಾಗಿದ್ದೀರಿ, ನೀವು ಕೊಲೆಗಡುಕ ಎಂದು ನಾನು ಹೇಳಿದ್ದು ನಿಜ. ನಾನು ಆ ಮಾತಿನಿಂದ ಹಿಂದೆ ಸರಿಯುವುದಿಲ್ಲ, ಹೆಣ್ಣಿನ ಮಾನ, ಶೀಲದ ಬಗ್ಗೆ ಬಳಸಬಾರದ ಪದ ಬಳಸಿದ ಸಿ ಟಿ ರವಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments