Homeಕರ್ನಾಟಕಬೆಂಗಳೂರು | ಪಾನಮತ್ತ ಚಾಲಕರ ವಿರುದ್ಧ ಪೊಲೀಸ್‌ ಕಾರ್ಯಾಚರಣೆ

ಬೆಂಗಳೂರು | ಪಾನಮತ್ತ ಚಾಲಕರ ವಿರುದ್ಧ ಪೊಲೀಸ್‌ ಕಾರ್ಯಾಚರಣೆ

ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಪಾನಮತ್ತರಾಗಿ ವಾಹನ ಚಲಾಯಿಸುವವರು ಹಾಗೂ ಅತಿವೇಗದ ವಾಹನ ಚಾಲನೆಯ ವಿರುದ್ಧ ಪೊಲೀಸರು ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸರು ಕಳೆದ ಒಂದು ವಾರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, 60,903 ವಾಹನ ಚಾಲಕರನ್ನು ತಪಾಸಣೆ ನಡೆಸಿದ್ದು, ಒಟ್ಟು 769 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಆರೋಪಿತ ಚಾಲಕರ ಡ್ರೈವಿಂಗ್ ಲೈಸೆನ್ಸ್ ರದ್ದುಗೊಳಿಸುವಂತೆ ಸಾರಿಗೆ ಇಲಾಖೆಗೆ ಪತ್ರ ಬರೆಯಲಾಗುವುದು. ಅದೇ ರೀತಿ ನಗರದಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದ 241 ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 2.41 ಲಕ್ಷ ರೂ. ದಂಡ ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿಯೂ ಸಂಚಾರ ಪೊಲೀಸ್ ಇಲಾಖೆಯಿಂದ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments