HomeSportಟೆಸ್ಟ್​ ಕ್ರಿಕೆಟ್​ | ವಿಶ್ವ ದಾಖಲೆ ಬರೆದ ಜಸ್​ಪ್ರೀತ್ ಬೂಮ್ರಾ, 200 ವಿಕೆಟ್‌ ಸಾಧನೆ

ಟೆಸ್ಟ್​ ಕ್ರಿಕೆಟ್​ | ವಿಶ್ವ ದಾಖಲೆ ಬರೆದ ಜಸ್​ಪ್ರೀತ್ ಬೂಮ್ರಾ, 200 ವಿಕೆಟ್‌ ಸಾಧನೆ

ಮೆಲ್ಬರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 4 ವಿಕೆಟ್ ಕಬಳಿಸಿದ್ದ ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬೂಮ್ರಾ, ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಮತ್ತೆ 4 ವಿಕೆಟ್ ಉರುಳಿಸಿದ್ದಾರೆ. ಈ 8 ವಿಕೆಟ್​ಗಳೊಂದಿಗೆ ಬುಮ್ರಾ ಟೆಸ್ಟ್​ ಕ್ರಿಕೆಟ್​ನಲ್ಲಿ 200 ವಿಕೆಟ್​​ಗಳ ಸಾಧನೆ ಮಾಡಿದ್ದಾರೆ.

ಟ್ರಾವಿಸ್‌ ಹೆಡ್ ಅವರನ್ನು ಔಟ್ ಮಾಡಿದ ಬೂಮ್ರಾ, ಟೆಸ್ಟ್ ಕ್ರಿಕೆಟ್‌ನಲ್ಲಿ 200ನೇ ವಿಕಟ್ ಗಳಿಸಿದರು. 44ನೇ ಟೆಸ್ಟ್ ಪಂದ್ಯದಲ್ಲಿ ಬೂಮ್ರಾ ಈ ಸಾಧನೆ ಮಾಡಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತ್ಯುತ್ತಮ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ಬೌಲರ್​ ಎಂಬ ವಿಶ್ವ ದಾಖಲೆಯನ್ನು ಜಸ್​ಪ್ರೀತ್ ಬೂಮ್ರಾ ತಮ್ಮದಾಗಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ ಪರ ಈವರೆಗೆ 44 ಟೆಸ್ಟ್ ಪಂದ್ಯಗಳನ್ನಾಡಿರುವ ಬುಮ್ರಾ 8,494 ಎಸೆತಗಳನ್ನು ಎಸೆದಿದ್ದು ಈ ಮೂಲಕ ಒಟ್ಟು 202 ವಿಕೆಟ್ ಕಬಳಿಸಿದ್ದಾರೆ. ಕೇವಲ 19.38 ರನ್ ಸರಾಸರಿಯಲ್ಲಿ ಎಂಬುದು ವಿಶೇಷ. ಈ ಮೂಲಕ 147 ವರ್ಷಗಳ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ 20 ಕ್ಕಿಂತ ಕಡಿಮೆ ಅವರೇಜ್​ನಲ್ಲಿ 200 ವಿಕೆಟ್ ಕಬಳಿಸಿದ ವಿಶ್ವದ ಏಕೈಕ ಬೌಲರ್ ಎಂಬ ಹೊಸ ದಾಖಲೆಗೆ ಜಸ್​ಪ್ರೀತ್ ಬೂಮ್ರಾ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ಜೋಯಲ್ ಗಾರ್ನರ್ 20.34 ರ ಸರಾಸರಿಯಲ್ಲಿ 200 ವಿಕೆಟ್ ಕಬಳಿಸಿದ್ದು ಟೆಸ್ಟ್​ನಲ್ಲಿ ಶ್ರೇಷ್ಠ ಸಾಧನೆಯಾಗಿತ್ತು.ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 200 ವಿಕೆಟ್ ಗಳಿಸಿದ ವಿಶ್ವದ ನಾಲ್ಕನೇ ಬೌಲರ್ ಎಂಬ ಗೌರವಕ್ಕೆ ಬೂಮ್ರಾ ಭಾಜನರಾಗಿದ್ದಾರೆ. ಜೊತೆಗೆ ಜಸ್‌ಪ್ರೀತ್ ಬೂಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಗಳಿಸಿದ ಭಾರತದ 12ನೇ ಬೌಲರ್ ಕೂಡ ಎನಿಸಿದ್ದಾರೆ.

200 ವಿಕೆಟ್ ಗಳಿಸಿದ ಬೌಲರ್‌ಗಳ ಪಟ್ಟಿಯಲ್ಲಿ ಬೂಮ್ರಾ ಅತ್ಯುತ್ತಮ ಬೌಲಿಂಗ್ ಸರಾಸರಿಯನ್ನು (19.56) ಕಾಪಾಡಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್‌ನ ಮಾರ್ಷಲ್ (20.94) ದಾಖಲೆಯನ್ನು ಮೀರಿಸಿದ್ದಾರೆ.

ವೇಗದಲ್ಲಿ 200 ವಿಕೆಟ್ ಸಾಧನೆ (ಎಸೆತ)

ವಕಾರ್ ಯೂನಿಸ್: 7,725

ಡೇಲ್‌ಸ್ಟೇನ್ : 7,948‌

ಕಗಿಸೊ ರಬಾಡ: 8,153

ಜಸ್‌ಪ್ರೀತ್ ಬೂಮ್ರಾ: 8,484

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments