Homeಕರ್ನಾಟಕಸಚಿನ್ ಡೆತ್ ನೋಟ್‌ನಲ್ಲಿ ಬಿಜೆಪಿ ನಾಯಕರ ಹೆಸರಿವೆ, ಸಿಬಿಐ ತನಿಖೆಯಾಗಲಿ: ವಿಜಯೇಂದ್ರ

ಸಚಿನ್ ಡೆತ್ ನೋಟ್‌ನಲ್ಲಿ ಬಿಜೆಪಿ ನಾಯಕರ ಹೆಸರಿವೆ, ಸಿಬಿಐ ತನಿಖೆಯಾಗಲಿ: ವಿಜಯೇಂದ್ರ

ಬಿಜೆಪಿ ಶಾಸಕರನ್ನು ಹಾಗೂ ಮುಖಂಡರನ್ನು ಗುರಿಯಾಗಿಸಿ ನಡೆಯುತ್ತಿರುವ ಹಲ್ಲೆಗಳು ಹಾಗೂ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

“ಸಚಿವ ಪ್ರಿಯಾಂಕ್‌ ಖರ್ಗೆ ಅವರ ಬಲಗೈ ಬಂಟ ರಾಜುವಿನ ಕಿರುಕುಳದಿಂದ ಆತ್ಮಹತ್ಯೆಗೀಡಾದ ಬೀದರ್ ನ ಗುತ್ತಿಗೆದಾರ ಸಚಿನ್ ಬರೆದಿರುವ ಡೆತ್ ನೋಟ್ ನಲ್ಲಿ ನಮ್ಮ ಪಕ್ಷದ ಶಾಸಕರಾದ ಬಸವರಾಜ್‌ ಮತ್ತಿಮಡು, ಬಿಜೆಪಿ ನಾಯಕರಾದ ಚಂದು ಪಾಟೀಲ್‌, ಮಣಿಕಂಠ ರಾಥೋಡ್‌ ಹಾಗೂ ಆಂದೋಲ ಸ್ವಾಮೀಜಿಯವರನ್ನು ಹತ್ಯೆ ಮಾಡಲು ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ್‌ಗೆ ಸುಪಾರಿ ನೀಡಿರುವ ಆತಂಕಕಾರಿ ಹಾಗೂ ಗಂಭೀರ ಮಾಹಿತಿ ಬಹಿರಂಗವಾಗಿದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರು ಡಿಸೆಂಬರ್ 26 ರಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ ಸೇರಿದಂತೆ ಎಂಟು ಜನರ ಹೆಸರುಗಳನ್ನು ಮರಣ ಪತ್ರದಲ್ಲಿ ಬರೆದಿದ್ದರು. ಬೀದರ್ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶನಿವಾರ ಬಿಜೆಪಿಯ ಕಲಬುರಗಿ ಹಾಗೂ ಬೀದ‌ರ್ ನಿಯೋಗ ಸಚಿನ್ ಅವರ ಮನೆಗೆ ಭೇಟಿ ನೀಡಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದವು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments