ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ನಡೆಯಲಿದೆ ಎಂದು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಬೆಳಗ್ಗೆ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮ್ಮತಿ ಪಡೆದಿದ್ದಾರೆ.
ಫೆ. 28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಉದ್ಘಾಟನೆ ಮಾಡಲಿದ್ದು, ಮಾರ್ಚ್ 1 ಮತ್ತು 2 ರಂದು ಕಾರ್ಯಕ್ರಮಗಳು ಇರಲಿವೆ. ಮಾರ್ಚ್ 2 ರಂದು ಸಮಾರೋಪ ನಡೆಯಲಿದೆ. ಹಂಪಿ ಉತ್ಸವ ಕ್ಕೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.