Homeಕರ್ನಾಟಕಕಚೇರಿಲ್ಲೇ ರಾಸಲೀಲೆ: ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ಕಚೇರಿಲ್ಲೇ ರಾಸಲೀಲೆ: ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ

ಪೊಲೀಸ್ ಕಚೇರಿಯಲ್ಲಿ ಮಹಿಳೆ ಜೊತೆ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ.‌

ಲೈಂಗಿಕ ದೌರ್ಜನ್ಯದ ವಿಡಿಯೊ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡಿದ ನಂತರ ಸೇವೆಯಿಂದ ಅಮಾನತು ಮಾಡಲಾಗಿತ್ತು. ನಂತರ ಮಧುಗಿರಿ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದರು.

ಶುಕ್ರವಾರ ರಾತ್ರಿ ಬಂಧಿಸಿದ್ದ ಪೊಲೀಸರು ಶನಿವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನ್ಯಾಯಾಂಗ ಬಂಧನ ಆದೇಶದ ನಂತರ ತಾಲ್ಲೂಕು ಉಪ ಕಾರಾಗೃಹಕ್ಕೆ ಕಳುಹಿಸಲಾಯಿತು.

ಜಿಲ್ಲೆಯ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ಕಚೇರಿಗೆ ಪಾವಗಡ ಮೂಲದ ಮಹಿಳೆಯೊಬ್ಬರು ತಮ್ಮ ಜಮೀನಿನ ವ್ಯಾಜ್ಯ ವಿಚಾರಕ್ಕೆ ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪಗೆ ದೂರು ನೀಡಲು ಬಂದಿದ್ದರು. ಈ ವೇಳೆ ಡಿವೈಎಸ್​​ಪಿ ಆಕೆಯನ್ನು ಪುಸಲಾಯಿಸಿ ಕಚೇರಿಯಲ್ಲಿರುವ ಚೇಂಬರ್​​ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಕೃತ್ಯ ಮೊಬೈಲ್​​ಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡ ತುಮಕೂರು ಎಸ್​​ಪಿ ಅಶೋಕ್ ವೆಂಕಟ್ ರಿಪೋರ್ಟ್ ತರಿಸಿಕೊಂಡು ಮೇಲಾಧಿಕಾರಿಗಳಿಗೆ ಕಳಿಸಿದ್ದಾರೆ. ಕೂಡಲೇ ಸಂಜೆ ವೇಳೆಗೆ ಡಿಜಿ ಆ್ಯಂಡ್​ ಐಜಿಪಿ ಅಲೋಕ್ ಮೋಹನ್ ರಾಸಲಿಲೆ ಪ್ರಕರಣ ಕಂಡು ಡಿವೈಎಸ್​​ಪಿ ರಾಮಚಂದ್ರಪ್ಪರನ್ನ ಅಮಾನತು ಮಾಡಿದ್ದರು.

ಅತ್ಯಾಚಾರ ಕೇಸ್ ಅಡಿ ದೂರು ದಾಖಲಿಸಿಕೊಂಡು ರಾಮಚಂದ್ರಪ್ಪರನ್ನ ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಬಳಿಕ ಮೆಡಿಕಲ್​ಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮೆಡಿಕಲ್ ಚೆಕಪ್ ಮಾಡಿಸಿದ್ದಾರೆ. ಇನ್ನೂ ಇದಾದ ಬಳಿಕ ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಜಡ್ಜ್ ‌ಬಳಿ ಹಾಜರುಪಡಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments