ಮನೆಗಳ್ಳತನಕ್ಕೆ ನುಗ್ಗಿದ ದುಷ್ಕರ್ಮಿಯೊಬ್ಬ ಪ್ರತಿರೋಧ ತೋರಿದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ ಮಾಡಿರುವ ಘಟನೆ ನಡೆದಿದೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿರುವ ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಟ ಸೈಫ್ ಅಲಿ ಖಾನ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ದುಷ್ಕರ್ಮಿಯೊಬ್ಬ ಕಳ್ಳತನಕ್ಕೆಂದು ಬಂದಿದ್ದ. ಈ ವೇಳೆ ಪ್ರತಿರೋಧ ತೋರಿದ ನಟನಿಗೆ ಆತ ಚಾಕುವಿನಿಂದು ಇರಿದು ಪರಾರಿಯಾಗಿದ್ದಾನೆ. ಘಟನೆ ವೇಳೆ ನಟನ ಕುಟುಂಬಸ್ಥರು ಕೂಡ ಮನೆಯಲ್ಲಿದ್ದರು.
ಶ್ರೀಮಂತ ನಟ ಎಂಬ ಕಾರಣಕ್ಕೆ ಕೆಲವರು ಅವರ ಮನೆಗೆ ಕನ್ನ ಹಾಕಲು ಪ್ರಯತ್ನಿಸಿದ್ದಾರೆ. ಈ ವೇಳೆ ಸೈಫ್ ಅಲಿ ಖಾನ್ ಅವರು ತಡೆಯಲು ಪ್ರಯತ್ನಿಸಿದ್ದಾರೆ. ಆಗ ಅವರಿಗೆ ಗಾಯ ಆಗಿದೆ. ಅವರನ್ನು ಸದ್ಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಸೈಫ್ ಅಲಿ ಖಾನ್ ಅವರು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಟುಂಬದವರ ಜೊತೆ ಮಲಗಿದ್ದರು. ರಾತ್ರಿ 2.30ರ ವೇಳೆಗೆ ಕಳ್ಳರು ಮನೆ ಒಳಗೆ ನುಗ್ಗಿದ್ದಾರೆ. ಈ ವೇಳೆ ಎಲ್ಲರಿಗೂ ಎಚ್ಚರ ಆಗಿದೆ. ಆಗ ಸೈಫ್ ಅವರು ಕಳ್ಳರನ್ನು ತಡೆಯಲು ಹೋಗಿದ್ದು, ಈ ವೇಳೆ ಕಳ್ಳರು ಹಲ್ಲೆ ಮಾಡಿದ್ದಾರೆ. ತಕ್ಷಣ ಕಳ್ಳರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕಳ್ಳರ ಬಂಧನಕ್ಕೆ ತೀವ್ರ ಶೋಧ ನಡೆಯುತ್ತಿದೆ.
ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ವಿಶೇಷ ಪೊಲೀಸರ ತಂಡ ರಚನೆ ಆಗಿದೆ. ಮನೆ ಹಾಗೂ ಸುತ್ತಮುತ್ತ ಇರುವ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ಮಾಡಲಾಗುತ್ತಿದೆ. ಸದ್ಯ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಬಗ್ಗೆ ಪೊಲೀಸರು ಪ್ರತಿಕ್ರಿಯಿಸಿದ್ದು, “ಕಳ್ಳರು 2-3 ಬಾರಿ ಹಲ್ಲೆ ಮಾಡಿದ್ದಾರೆ. ನಾವು ಇದನ್ನು ತನಿಖೆ ನಡೆಸುತ್ತಿದ್ದೇವೆ. ಮುಂಬೈ ಕ್ರೈಮ್ ಬ್ರ್ಯಾಂಚ್ ಕೂಡ ತನಿಖೆ ನಡೆಸುತ್ತಿದೆ. ಮುಂಜಾನೆ 3 ಗಂಟೆಗೆ ಸೈಫ್ ಅವರನ್ನು ಲೀವಾತಿ ಆಸ್ಪತ್ರೆಗೆ ಕರೆತರಲಾಗಿದೆ. ಅವರಿಗೆ ಆರು ಗಾಯಗಳಾಗಿದ್ದು, ಎರಡು ಕಡೆ ತುಂಬಾನೇ ಗಂಭೀರ ಗಾಯವಾಗಿದೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
“ಬೆನ್ನಿನ ಭಾಗದಲ್ಲಿ ಕಳ್ಳರು ಇರಿದ ಚಾಕು ತುಂಬಾನೇ ದೊಡ್ಡ ಗಾಯವನ್ನೇ ಮಾಡಿದೆ ಎನ್ನಲಾಗಿದೆ. ಬೆನ್ನಿನ ಮೂಳೆಗೆ ತೊಂದರೆ ಆಗಿದೆಯೇ ಎನ್ನುವ ಬಗ್ಗೆ ಪರೀಕ್ಷೆ ನಡೆಯುತ್ತಿದೆ. ಸದ್ಯ ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯ ಇದೆ” ಎನ್ನಲಾಗಿದೆ.