Homeಕರ್ನಾಟಕಮಾಜಿ ಸಂಸದ ಎಂ. ಶ್ರೀನಿವಾಸ್ ನಿಧನ

ಮಾಜಿ ಸಂಸದ ಎಂ. ಶ್ರೀನಿವಾಸ್ ನಿಧನ

ಕನಕಪುರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಹಾಗೂ ಉತ್ತರ ಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಂ. ಶ್ರೀನಿವಾಸ್ (83) ಅವರು ಗುರುವಾರ ನಿಧನರಾಗಿದ್ದಾರೆ.

ಇತ್ತೀಚೆಗೆ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಜ. 16ರ ಸಂಜೆ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರ ಹಾಲಿ ಶಾಸಕರಾದ ಎಂ. ಕೃ,ಷ್ಣಪ್ಪ ಅವರು ಶ್ರೀನಿವಾಸ್ ಅವರ ಸಹೋದರ. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ.

ಜ. 16ರ ಸಂಜೆಯೇ ಶ್ರೀನಿವಾಸ್ ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಜಯನಗರದ 7ನೇ ಬ್ಲಾಕ್ ನಲ್ಲಿರುವ ಅವರ ನಿವಾಸಕ್ಕೆ ಕೊಂಡೊಯ್ಯಲಾಗಿದೆ. ಅಲ್ಲಿ ಅವರ ಸಂಬಂಧಿಕರು, ಅಭಿಮಾನಿಗಳು, ಬೆಂಬಲಿಗರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೃತರ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ಜ. 17ರಂದು ಉತ್ತರಹಳ್ಳಿಯಲ್ಲಿ ನಡೆಯಲಿದೆ. ಜ. 17ರ ಬೆಳಗ್ಗೆಯಿಂದ ಮ. 3 ಗಂಟೆವರೆಗೆ ಉತ್ತರಹಳ್ಳಿ ಸರ್ಕಲ್ ನಲ್ಲಿರುವ ಮೆಟ್ರೋ ಕ್ಯಾಶ್ ಅಂಡ್ ಕ್ಯಾರಿ ಬಳಿ ಇರುವ ಆರ್ ಎನ್ಎಸ್ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ.

ಮಾಜಿ ಸಂಸದ ಎಂ. ಶ್ರೀನಿವಾಸ್ ನಿಧನಕ್ಕೆ ನಾಡಿನ ಹಲವಾರು ಗಣ್ಯರು ವಿಷಾದ ವ್ಯಕ್ತಪಡಿಸಿದ್ದಾರೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಶೋಕ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments