Homeಕರ್ನಾಟಕಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆ ಕಟ್‌ ಆಗಿ ದಾರುಣ ಸಾವು

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆ ಕಟ್‌ ಆಗಿ ದಾರುಣ ಸಾವು

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆ ಮತ್ತು ಕೈ ಕತ್ತರಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ಶನಿವಾರ ಸಂಭವಿಸಿದೆ.

ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್​​ಟೇಕ್​ ವೇಳೆ ಅಪಘಾತ ಸಂಭವಿಸಿದ್ದು, ಬೇಗೂರು ಸಮೀಪದ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ (43) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಅವರು ಮೈಸೂರಿನಿಂದ ಗುಂಡ್ಲುಪೇಟೆಗೆ ನಂಜನಗೂಡು ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು.

ಈ ಸಂದರ್ಭದಲ್ಲಿ ಸಿಂಧುವಳ್ಳಿ ಗ್ರಾಮದ ಬಳಿ ಮಹಿಳೆಯು ಬಸ್​​ನ ಕಿಟಕಿಯಿಂದ ಕತ್ತನ್ನು ಹೊರಹಾಕಿದ್ದು, ಅದೇ ಸಮಯದಲ್ಲಿ ಹಿಂದಿನಿಂದ ಬಂದ ಟಿಪ್ಪರ್ ಮತ್ತು ಸಾರಿಗೆ ಬಸ್ ನಡುವೆ ಕ್ಷಣಾರ್ಧದಲ್ಲಿ ಅಪಘಾತವಾಗಿದೆ. ಪರಿಣಾಮ ಶಿವಲಿಂಗಮ್ಮ ಕುತ್ತಿಗೆ ಮತ್ತು ಕೈ ಕಟ್ ಆಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಟಿಪ್ಪರ್ ಚಾಲಕ ವಾಹನ ಸಮೇತ ಸ್ಥಳದಿಂದ ಪರಾರಿಯಾಗಿದ್ದಾನೆ.

ನಂಜನಗೂಡು ಸಂಚಾರ ಪೊಲೀಸ್ ಠಾಣೆ ಪಿಎಸ್ಐ ಸಿದ್ದರಾಜು ಮತ್ತು ಸಿಬ್ಬಂದಿ ಮಹೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಾರಿಗೆ ಬಸ್ ವಶಕ್ಕೆ ಪಡೆದುಕೊಂಡಿದ್ದಾರೆ. ನಾಪತ್ತೆಯಾಗಿರುವ ಟಿಪ್ಪರ್ ವಾಹನವನ್ನು ಪತ್ತೆ ಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments