Homeಕರ್ನಾಟಕಪ್ರಶಾಂತ್ ಸಂಬರಗಿ ವಿರುದ್ಧ ದೂರು ನೀಡಿದ ನಟ ಪ್ರಕಾಶ್‌ ರಾಜ್

ಪ್ರಶಾಂತ್ ಸಂಬರಗಿ ವಿರುದ್ಧ ದೂರು ನೀಡಿದ ನಟ ಪ್ರಕಾಶ್‌ ರಾಜ್

ಪ್ರಶಾಂತ್ ಸಂಬರಗಿ ನನ್ನ ಖ್ಯಾತಿಗೆ ಕುತ್ತು ತರುವ ಉದ್ದೇಶದಿಂದ ಉದ್ದೇಶಪೂರ್ವಕವಾಗಿ ಫೇಸ್‌ಬುಕ್‌ನಲ್ಲಿ ನನ್ನ ಹೆಸರು ಬಳಸಿ ಕೃತಕ ಬುದ್ದಿಮತ್ತೆಯ ಮೂಲಕ ಸೃಷ್ಟಿಸಿದ ಭಾವಚಿತ್ರ ಬಳಸಿದ್ದು, ಸುಳ್ಳು ಶೀರ್ಷಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಹುಭಾಷಾ ನಟ ಪ್ರಕಾಶ್‌ ರಾಜ್ ಅವರು ಪ್ರಶಾಂತ್ ಸಂಬರಗಿ ವಿರುದ್ಧ ದೂರು ನೀಡಿದ್ದಾರೆ.

ಮೈಸೂರಿನ ಲಕ್ಷ್ಮಿಪುರಂ ಠಾಣೆಗೆ ಶನಿವಾರ ದೂರು ನೀಡಿರುವ ಅವರು, ” ನಟಿಯರೂ ಸೇರಿದಂತೆ ಅನೇಕರಿಗೆ ಪ್ರಶಾಂತ್ ಸಂಬರಗಿ ಈ ರೀತಿ ತೊಂದರೆ ನೀಡಿದ್ದಾನೆ. ಆತನಿಗೆ ಪಾಠ ಆಗಬೇಕು. ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿ ಹರಡುವವರಿಗೂ ಇದೊಂದು ಪಾಠವಾಗಲಿ. ತಪ್ಪು ಪ್ರಚಾರ ಮಾಡುವುದು, ಅನುಮತಿ ಇಲ್ಲದೆ ಯಾರದೋ ಫೋಟೊಗಳನ್ನು ಬಳಸುವುದು ಅಕ್ಷಮ್ಯ ಅಪರಾಧ” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಪ್ರಶಾಂತ್‌ ಸಂಬರಗಿ ನಕಲಿ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ, ‘ಕುಂಭಮೇಳದಲ್ಲಿ ನಟ ಪ್ರಕಾಶ್‌ ರಾಜ್.‌ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು. ಅವರ ಎಲ್ಲ ಪಾಪಗಳನ್ನು ಕ್ಷಮಿಸಿ, ತೆಗೆದುಹಾಕಲಾಗುವುದು ಎಂದು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದರು.‌

“ಪ್ರಶಾಂತ್ ಸಂಬರಗಿ ಅವರಿಗೆ ಇ-ಮೇಲ್ ಮೂಲಕ ನೋಟಿಸ್ ಕಳುಹಿಸಿದ್ದು, ತನಿಖೆ ಮುಂದುವರಿದಿದೆ” ಎಂದು ಪೊಲೀಸರು ತಿಳಿಸದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments