ಅಳಂದ ಕ್ಷೇತ್ರದ ಶಾಸಕ ಬಿ.ಆರ್ ಪಾಟೀಲ್ ಮುಖ್ಯಮಂತ್ರಿಗಳ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು, ಇಂದು (ಫೆ.1) ಅವರು ತಮ್ಮ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ.
ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಬಿ.ಆರ್ ಪಾಟೀಲ್ ಅವರಿಗೆ ಸಚಿವ ಪಟ್ಟ ಸಿಕ್ಕಿರಲಿಲ್ಲ. ಆಗ ಅವರ ಮನವೊಲಿಸಿ ಮುಖ್ಯಮಂತ್ರಿಗಳ ಸಲಹೆಗಾರರಾಗಿ ನೇಮಕ ಮಾಡಲಾಗಿತ್ತು. ಈಗ ಬಿ.ಆರ್ ಪಾಟೀಲ್ ಮುಖ್ಯಮಂತ್ರಿಗಳ ಸಲಹೆಗಾರ ಹುದ್ದೆಗೆ ರಾಜೀನಾಮೆ ನಿಡಿರುವುದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲೂ ಬಿ.ಆರ್ ಪಾಟೀಲ್ ಅವರು ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ನೀಡದ ಬಗ್ಗೆ ಅಸಮಾಧಾನಗಳನ್ನು ವ್ಯಕ್ತಪಡಿಸುತ್ತಲೇ ಬಂದಿದ್ದರು. ಈಗ ದಿಢೀರ್ ಎಂದು ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ. ರಾಜೀನಾಮೆಗೆ ಕಾರಣ ಏನೆಂಬುದು ಸದ್ಯಕ್ಕೆ ಗೊತ್ತಾಗಿಲ್ಲ.