Homeಕರ್ನಾಟಕಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಕುರಿತು ಮಹತ್ವದ ಸಭೆ

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ ಕುರಿತು ಮಹತ್ವದ ಸಭೆ

ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ನಿಟ್ಟಿನಲ್ಲಿ ಶನಿವಾರ ಮಹತ್ವದ ಸಭೆ ನಡೆಯಿತು. ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸಭೆಯಲ್ಲಿ ಭಾಗಿಯಾಗಿದ್ದರು.

ಸಭೆಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್‌ಲೈನ್‌ ಪೋರ್ಟಲ್ ಮಾಡಿ ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡುವ ವ್ಯವಸ್ಥೆ ರೂಪಿಸಲು ಚಿಂತನೆ ನಡೆಯಿತು.

ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ RBI ನೀತಿಗೆ ಅನುಗುಣವಾಗಿರಬೇಕು. ಮೈಕ್ರೋ ಫೈನಾನ್ಸ್ ಕಂಪೆನಿಗಳು ಕಡ್ಡಾಯವಾಗಿ ರಾಜ್ಯದಲ್ಲಿ ನೋಂದಣಿಯಾಗಿರಬೇಕು” ಎಂದು ನಿರ್ಧರಿಸಲಾಯಿತು ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಯಾವುದೇ ಸಂದರ್ಭದಲ್ಲಿ ಈ ನೋಂದಣಿಯನ್ನ ಸರ್ಕಾರ ತಿರಸ್ಕರಿಸಬದುದು. ಮೈಕ್ರೋ ಫೈನಾನ್ಸ್ ಕಂಪೆನಿಗಳ ವ್ಯವಹಾರ ವಿಚಾರಣೆಗೆ ಪ್ರತಿ ಜಿಲ್ಲೆಯಲ್ಲಿ ADC-AC ಒಳಗೊಂಡ ಬೋರ್ಡ್‌ ನೇಮಕ ಮಾಡಬೇಕು. ಈ ಕಂಪೆನಿಗಳು ಸಾಲದ ಹೆಸರಲ್ಲಿ ಜನರಿಂದ ಯಾವ ವಸ್ತುಗಳು-ಆಸ್ತಿಗಳನ್ನ ಅಡಮಾನ ಇಡಿಸಿಕೊಳ್ಳುವಂತಿಲ್ಲ. ಸಾಲ ಮರುಪಾವತಿ ಮಾಡದವರ ವಿರುದ್ಧ ಮಧ್ಯವರ್ತಿಗಳ ಮೂಲಕ ದಬ್ಬಾಳಿಕೆ ಮಾಡುವಂತಿಲ್ಲ ಎಂಬುದೂ ಸೇರಿದಂತೆ ಹಲವು ಪ್ರಮುಖ ವಿಚಾರಗಳನ್ನು ಕಾನೂನಿನ ಚೌಕಟ್ಟಿನೊಳಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments