ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದ ಶಾಸಕ ಬಿ ಆರ್ ಪಾಟೀಲ್ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದೆ.
ಬಿ ಆರ್ ಪಾಟೀಲ್ ಅವರಿಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಉಪಾಧ್ಯಕ್ಷ ಸ್ಥಾನ ನೀಡುವುದರ ಜೊತೆಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ಎಲ್ಲ ಸೌಲಭ್ಯಗಳೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಫೆ.17ರಂದು ಸರ್ಕಾರ ಆದೇಶಿಸಿದೆ.
ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಚರ್ಚೆ ಜೋರಾಗಿದ್ದ ಸಮಯದಲ್ಲಿ ಶಾಸಕ ಬಿ ಆರ್ ಪಾಟೀಲ್ ಅವರು ಫೆ.1ರಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಮುಖ್ಯಮಂತ್ರಿ ಸಲಹೆಗಾರರಗಾಗಿ ಒಂದು ವರ್ಷದಿಂದ ಸೇವೆ ಸಲ್ಲಿಸಿದ್ದ ಬಿ ಆರ್ ಪಾಟೀಲ್ ಅವರು ಸಿದ್ದರಾಮಯ್ಯ ಅವರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಸಚಿವ ಸ್ಥಾನ ಕೈತಪ್ಪಿದಾಗ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಶರಣಪ್ರಕಾಶ್ ಪಾಟೀಲ್ ವಿರುದ್ಧ ಅಸಮಾಧಾನ ಹೊರಹಾಕಿದ್ದರು.