Homeಕರ್ನಾಟಕಮಂಗಳೂರು | ಕೆನರಾ ಬ್ಯಾಂಕ್ ಲಾಕರ್‌ನಲ್ಲಿ ಗೆದ್ದಲು ಹಿಡದ 8 ಲಕ್ಷ ರೂ. ನೋಟು

ಮಂಗಳೂರು | ಕೆನರಾ ಬ್ಯಾಂಕ್ ಲಾಕರ್‌ನಲ್ಲಿ ಗೆದ್ದಲು ಹಿಡದ 8 ಲಕ್ಷ ರೂ. ನೋಟು

ಮಂಗಳೂರಿನ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿಟ್ಟಿದ್ದ 8 ಲಕ್ಷ ರೂ. ನೋಟುಗಳು ಗೆದ್ದಲು ಹಿಡಿದು ಪುಡಿಯಾಗಿರುವ ಸಂಬಂಧ ಗ್ರಾಹಕರೊಬ್ಬರು ನಗರದ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ.

ಮಂಗಳೂರಿನ ಕೋಟೆಕಾರ್‌ನ ಸಫಲ್‌ ಎಂಬ ಗ್ರಾಹಕರೊಬ್ಬರು ಹತ್ತಿರದ  ಕೆನರಾ ಬ್ಯಾಂಕ್ ಶಾಖೆಯಲ್ಲಿ 8 ಲಕ್ಷ ರೂ. ಇಟ್ಟಿದ್ದರು. 6 ತಿಂಗಳ ಬಳಿಕ ಔಷಧಿಗಾಗಿ ದುಡ್ಡು ತೆಗೆಯಲು ಬ್ಯಾಂಕ್‌ಗೆ ಬಂದಿದ್ದಾರೆ ಅಧಿಕಾರಿಗಳು ಖುದ್ದಾಗಿ ಲಾಕರ್ ತೆರೆದು ನೋಡಿದಾಗ ನೆಂದ ಸ್ಥಿತಿಯಲ್ಲಿದ್ದ ದುಡ್ಡು ಸಂಪೂರ್ಣವಾಗಿ ಕಪ್ಪಾಗಿತ್ತು. ಏನಿದು ಎಂದು ತೆಗೆದು ನೋಡಿದರೆ ಗೆದ್ದಲು ಹಿಡಿದು ನೋಟುಗಳು ಚೂರಾಗಿ ಬಿದ್ದಿದೆ. ಎಲ್ಲ ನೋಟುಗಳು ಇದೇ ರೀತಿ ಆಗಿದೆ.

ಆರ್‌ಬಿಐ ನಿಯಮದ ಪ್ರಕಾರ ಪ್ರಕಾರ ಹಣವನ್ನು ಲಾಕರ್‌ನಲ್ಲಿ ಇಡುವಂತಿಲ್ಲ ಹೀಗಾಗಿ ಇದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಬ್ಯಾಂಕ್‌ನವರು ಹೇಳಿದ್ದಾರೆ. ಹೀಗಾಗಿ ಸಫಲ್ ಕುಟುಂಬಸ್ಥರು ಬೆಂಗಳೂರಿಗೆ ಆಗಮಿಸಿ ಪ್ರಧಾನ ಕಚೇರಿಗೆ ದೂರು ನೀಡಿದ್ದಾರೆ.

ಹಳೆಯ ಕಟ್ಟಡ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದೆ. ಹೀಗಾಗಿ ಸರಿಪಡಿಸಬೇಕು ಎಂದು ಮನವಿ ಮಾಡಿದ್ದಾರೆ. ಲಾಕರ್‌ನಲ್ಲಿ ಹಣ ಇಡಬಾರದು ನಿಜ. ಆದರೆ ಬ್ಯಾಂಕ್‌ನಲ್ಲಿ ಹಣ ಇಟ್ಟರೆ ಸೇಫ್ ಎಂಬ ನಂಬಿಕೆಯಿಂದ ಹೀಗಾಗಿದೆ ಎಂದು ಸಫಲ್ ಬೇಸರ ವ್ಯಕ್ತಪಡಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments