Homeಕರ್ನಾಟಕಜೈಲಿನಲ್ಲಿರುವ ಕೊಲೆ ಆರೋಪಿಯಿಂದ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ

ಜೈಲಿನಲ್ಲಿರುವ ಕೊಲೆ ಆರೋಪಿಯಿಂದ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಕೊಲೆ ಪ್ರಕರಣದ ಆರೋಪಿ ಚಿತ್ರದುರ್ಗದ ಹಿರಿಯೂರಿನ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ತುಮಕೂರಿನ ಮಾಜಿ ಮೇಯರ್ ಗಡ್ಡ ರವಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸುಜಯ್ ಭಾರ್ಗವ್ ಅಲಿಯಾಸ್ ಸುಜಿ, ಹಿರಿಯೂರಿನ ಉದ್ಯಮಿ ಅರ್ಜುನ್ ಸಿಂಗ್ಗೆ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಜೈಲಿನಿಂದ ಬೆದರಿಕೆ ಹಾಕಿದ್ದು ಮಾತ್ರವಲ್ಲದೆ ತನ್ನ ಸಹಚರರನ್ನು ಕಳುಹಿಸಿ ಬೆದರಿಕೆ ಹಾಕಿಸಿದ್ದಾನೆ. ನಿರಂತರವಾಗಿ ವಾಯ್ಸ್ ಕಾಲ್, ಮೆಸೇಜ್ಗಳ ಮೂಲಕ ಬೆದರಿಕೆ ಹಾಕಿದ್ದಾನೆ ಎಂದು ಅರ್ಜುನ್ ಸಿಂಗ್ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ಅರ್ಜುನ್ ಸಿಂಗ್ ಅವರು ಹಿರಿಯೂರು ಸರ್ಕಾರಿ ಆಸ್ಪತ್ರೆ ಬಳಿ ಆಯಕಟ್ಟಿನ ಜಾಗದಲ್ಲಿರುವ ಕಟ್ಟಡದಲ್ಲಿ ಬಟ್ಟೆ ಮಳಿಗೆ ನಡೆಸುತ್ತಿದ್ದಾರೆ. ಇದನ್ನು ಮೂರು ದಿನದಲ್ಲಿ ಕಟ್ಟಡ ಖಾಲಿ ಮಾಡದಿದ್ದರೆ ಜೀವ ಉಳಿಸಲ್ಲ. ಸುಟ್ಟು ಹಾಕುತ್ತೇನೆಂದು ಸುಜಯ್ ಭಾರ್ಗವ್ ಧಮ್ಕಿ ಹಾಕಿದ್ದಾನೆ.

ಕಳೆದ ಜ.10ರಂದು ಇಬ್ಬರು ಯುವಕರನ್ನು ಗಾರ್ಮೆಂಟ್ಸ್ ಗೆ ಕಳಿಸಿ ಧಮ್ಕಿ ಹಾಕಿಸಿದ್ದ ವಿಡಿಯೋ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. ಸುಜಯ್ ಕಡೆಯವರೆಂದು ಹೇಳಿಕೊಂಡು ಬಂದು ಯುವಕರು ಧಮ್ಕಿ ಹಾಕಿದ್ದರು. ಈ ಬಗ್ಗೆ ಹಿರಿಯೂರು ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈಗ ಮತ್ತೆ ನಿರಂತರ ಕರೆ, ವಾಯ್ಸ್ ಮೆಸೇಜ್ ಮೂಲಕ ಸುಜಯ್ ಧಮ್ಕಿ ಹಾಕುತ್ತಿದ್ದಾನೆ ಎನ್ನಲಾಗಿದೆ. ಕಟ್ಟಡ ಮಾಲೀಕ ಸೂರ್ಯನಾರಾಯಣ, ಅವರ ಪುತ್ರನಿಗೂ ಕರೆ ಮಾಡಿ ಆವಾಜ್ ಹಾಕಿದ್ದಾನೆ ಎಂದು ಹೇಳಲಾಗಿದೆ.
ಪರಪ್ಪನ ಅಗ್ರಹಾರದಲ್ಲಿರುವ ಪಾತಕಿಯ ಬೆದರಿಕೆ ಕರೆಯಿಂದ ಕಂಗೆಟ್ಟಿರುವ ಉದ್ಯಮಿ, ಕಟ್ಟಡ ಮಾಲೀಕರು ಸದ್ಯ ಸೂಕ್ತ ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments