Homeಕರ್ನಾಟಕಮಹಿಳೆಯ ವಿವಸ್ತ್ರ ಪ್ರಕರಣ ಬಗ್ಗೆ ಮಾಹಿತಿ ಸಂಗ್ರಹಿಸಿದ ಬಿಜೆಪಿ ಸತ್ಯಶೋಧನಾ ಸಮಿತಿ

ಮಹಿಳೆಯ ವಿವಸ್ತ್ರ ಪ್ರಕರಣ ಬಗ್ಗೆ ಮಾಹಿತಿ ಸಂಗ್ರಹಿಸಿದ ಬಿಜೆಪಿ ಸತ್ಯಶೋಧನಾ ಸಮಿತಿ

ಬೆಳಗಾವಿ: ಇಡೀ ರಾಜ್ಯ ಸರಕಾರವೇ ಬೆಳಗಾವಿಯಲ್ಲಿ ಇದ್ದರೂ ಮುಖ್ಯಮಂತ್ರಿ, ಡಿಜಿಪಿ, ಮುಖ್ಯ ಕಾರ್ಯದರ್ಶಿಗಳು ಮಹಿಳೆ ನಗ್ನಗೊಳಿಸಿ ಥಳಿಸಿದ ಘಟನೆ ನಡೆದ ಸ್ಥಳಕ್ಕೆ ಭೇಟಿ ಕೊಟ್ಟಿಲ್ಲವೇಕೆ? ಸಂತ್ರಸ್ತೆಯನ್ನು ಭೇಟಿ ಮಾಡಿಲ್ಲವೇಕೆ? ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ.

ಸಂಸದರಾದ ಅಪರಾಜಿತಾ ಸಾರಂಗಿ, ಸುನಿತಾ ದುಗ್ಗಲ್, ರಂಜಿತಾ ಕೋಲಿ, ಲಾಕೆಟ್ ಚಟರ್ಜಿ ಅಲ್ಲದೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಶಾ ಲಾಕ್ರಾ ಅವರ ನಿಯೋಗವು ಇಂದು ಬೆಳಗಾವಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ, ನಗ್ನಗೊಳಿಸಿ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆಯ ಮಾಹಿತಿ ಸಂಗ್ರಹಿಸಿತು. ಅಲ್ಲದೆ ನಿಯೋಗವು ಸಂತ್ರಸ್ತೆಯನ್ನೂ ಭೇಟಿ ಮಾಡಿತು.

ಅಪರಾಜಿತಾ ಸಾರಂಗಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ರಾಷ್ಟ್ರವೇ ತಲೆತಗ್ಗಿಸುವ ಘಟನೆ ಇದಾಗಿದೆ. ಸರಕಾರದ ಪ್ರಮುಖರು ಸಂತ್ರಸ್ತೆಯನ್ನು ಯಾಕೆ ಭೇಟಿ ಮಾಡಿಲ್ಲ” ಎಂದು ಪ್ರಶ್ನಿಸಿದರು.

“ಘಟನೆ ನಡೆದು 2 ಗಂಟೆವರೆಗೂ ಪೊಲೀಸರು ಸ್ಥಳಕ್ಕೆ ಬಂದಿಲ್ಲ. ಠಾಣಾಧಿಕಾರಿಗೆ ಸ್ಥಳಕ್ಕೆ ಹೋಗಬೇಕಾದಷ್ಟು ಮಹತ್ವದ ಪ್ರಕರಣ ಎಂದು ಅನಿಸಲಿಲ್ಲವೇ? ಮಹಿಳೆ, ಅದೂ ದಲಿತ ಮಹಿಳೆಯ ಮೇಲಿನ ದೌರ್ಜನ್ಯ ಇದಾಗಿದ್ದರೂ ಅವರು ಕೂಡಲೇ ಸ್ಥಳಕ್ಕೆ ತೆರಳಲಿಲ್ಲವೇಕೆ? ಎಂದು ಕೇಳಿದರು.

“ರಾಜ್ಯದ ಮಹಿಳೆಯರ ಸುರಕ್ಷತೆ ರಾಜ್ಯ ಸರಕಾರದ ಆದ್ಯತೆ ಆಗಬೇಕು. ಅದು ಪ್ರಥಮ ಆದ್ಯತೆ ಆಗಿರಲಿ. ಘಟನೆ ನಡೆದ ಮೇಲೆ ಕೂಡ ರಾಜ್ಯ ಸರಕಾರ ವಿಳಂಬವಾಗಿ ಸ್ಪಂದಿಸುತ್ತಿದೆ. ಇದು ಮಹಿಳೆಯರ ಘನತೆಯ ಪ್ರಶ್ನೆ” ಎಂದೂ ಅಭಿಪ್ರಾಯಪಟ್ಟರು.

ಆಶಾ ಲಾಕ್ರಾ ಅವರು ಮಾತನಾಡಿ, “ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ವಸ್ತುಸ್ಥಿತಿ ತಿಳಿಯಲು ಇಲ್ಲಿ ಬಂದಿದ್ದೇವೆ. ಮಧ್ಯರಾತ್ರಿ ಅಸಹಾಯಕ ಮಹಿಳೆಯ ಮೇಲೆ ಆಕ್ರಮಣ ನಡೆಸಲಾಗಿದೆ. ಮಹಿಳೆಯನ್ನು ಪರೇಡ್ ಮಾಡಿ, ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ತಡವಾಗಿ ಪೊಲೀಸರು ಆಗಮಿಸಿದ್ದಾರೆ. ಠಾಣೆ ಬಹಳ ದೂರದಲ್ಲಿ ಇಲ್ಲ; ಆದರೂ ಪೊಲೀಸರು ಸ್ಪಂದಿಸಿಲ್ಲವೇಕೆ? ಎಂದು ಕಿಡಿಕಾರದಿರು.

“ಕರ್ನಾಟಕದಲ್ಲಿ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ನಮಗೆ ಅನಿಸುತ್ತಿದೆ. ಠಾಣಾಧಿಕಾರಿಯ ನಿರ್ಲಕ್ಷ್ಯವು ಕಾಂಗ್ರೆಸ್ ಸರಕಾರದ ಮಾನಸಿಕತೆಯ ಪ್ರತೀಕ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ 43 ಸಾವಿರ ಕ್ರಿಮಿನಲ್ ಕೇಸುಗಳು ದಾಖಲಾಗಿವೆ” ಎಂದೂ ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments