ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಬೆಳಿಗ್ಗೆ ಶಿಕಾರಿಪುರದಲ್ಲಿ ಸೇವಾ ಸಂಕಲ್ಪ ಅಭಿಯಾನದ ಅಡಿಯಲ್ಲಿ ‘ಸ್ವಚ್ಛ ಶಿಕಾರಿಪುರ’ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸೇವಾ ಸಂಕಲ್ಪ ಅಭಿಯಾನವನ್ನು ರಾಷ್ಟ್ರವ್ಯಾಪಿಯಾಗಿ ನಡೆಸುತ್ತಿದ್ದು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ಸಾರ್ವಜನಿಕ ಸೇವೆಯ 25 ವರ್ಷಗಳ ಪೂರ್ಣಗೊಳ್ಳುವಿಕೆಯ ಸಂದರ್ಭದಲ್ಲಿ ಇದನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯ ಬಿಜೆಪಿ ಮಾತ್ರವಲ್ಲದೇ ದೇಶದೆಲ್ಲೆಡೆ ವಿವಿಧ ಸೇವಾ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದು ವಿಜಯೇಂದ್ರ ಅವರು ತಿಳಿಸಿದರು.
ಮೋದಿಜೀ ಅವರು ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಪ್ರತಿ ವರ್ಷ 15 ದಿನಗಳ ಕಾಲ ಸೇವಾ ಸಂಕಲ್ಪ ಅಭಿಯಾನ ನಡೆಸಲಾಗುತ್ತದೆ. ಈ ಬಾರಿ 1 ತಿಂಗಳ ಕಾಲ ರಕ್ತದಾನ ಶಿಬಿರಗಳು, ಧಾರ್ಮಿಕ ಕ್ಷೇತ್ರಗಳ ಪರಿಸರದ ಸ್ವಚ್ಛತಾ ಅಭಿಯಾನಗಳು ಮತ್ತು ಸಮಾಜ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ ಎಂದು ವಿವರಿಸಿದರು.
ಶಿಕಾರಿಪುರದ ಈ ಕಾರ್ಯಕ್ರಮದಲ್ಲಿ ಮಂಡಲದ ಪದಾಧಿಕಾರಿಗಳು, ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು.


